ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕಿನ ಸುಜ್ಞಾನನಿಧಿ ಶಿಷ್ಯವೇತನ ವಿತರಣಾ ಕಾರ್ಯಕ್ರಮ ಫೆ.17 ರಂದು ಬಂಟ್ವಾಳ ಯೋಜನಾ ಕಛೇರಿಯಲ್ಲಿ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು.
ಯೋಜನೆಯ ಪಾಲುದಾರ ಪ್ರಗತಿಬಂಧು ಸ್ವಸಹಾಯ ಸಂಘಗಳ ಸದಸ್ಯರ ಮಕ್ಕಳ ವೃತ್ತಿ/ ತಾಂತ್ರಿಕ ಶಿಕ್ಷಣಕ್ಕೆ ನೆರವು ನೀಡುವ ಯೋಜನೆಯಿದು. ಬಂಟ್ವಾಳ ತಾಲೂಕಿನಲ್ಲಿ 2019-20 ಸಾಲಿನ ಸುಜ್ಞಾನನಿಧಿ ಶಿಷ್ಯವೇತನಕ್ಕೆ ಆಯ್ಕೆಯಾದ 56 ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ಒಟ್ಟು 30, 200/- ರೂ. ಮೊತ್ತ ನೀಡಲಾಗುತ್ತಿದೆ. ಪ್ರಸ್ತುತ ತಿಂಗಳು ಒಟ್ಟು 211 ವಿದ್ಯಾರ್ಥಿಗಳಿಗೆ ಒಟ್ಟು ರೂ.1.77 ಲಕ್ಷ ಮೊತ್ತ ವಿತರಣೆ ಮಾಡಲಾಗಿದೆ. ವಾರ್ಷಿಕವಾಗಿ ಒಟ್ಟು ರೂ.11.36 ಲಕ್ಷ ವಿತರಣೆ ಮಾಡಲಾಗುತ್ತಿದೆ.
ಕಾರ್ಯಕ್ರಮ ಅಧ್ಯಕ್ಷತೆಯನ್ನು ಬಂಟ್ವಾಳ ತಾಲೂಕಿನ ಕೇಂದ್ರ ಒಕ್ಕೂಟ ಸಮಿತಿ ಅಧ್ಯಕ್ಷ ಮಾಧವ ಒಳವೂರು, ಜನಜಾಗೃತಿ ವೇದಿಕೆಯ ಅಧ್ಯಕ್ಷ ಬಾಲಕೃಷ್ಣ ಎಸ್.ಪಿ. ಕೊಡಾಜೆ 2019-20 ತಿಲಿ ಸಾಲಿನ ಸುಜ್ಞಾನನಿಧಿ ಶಿಷ್ಯವೇತನಕ್ಕೆ ಪ್ರಥಮ ಹಂತದಲ್ಲಿ ಆಯ್ಕೆಯಾದ 56 ವಿದ್ಯಾರ್ಥಿಗಳಿಗೆ ಮಂಜೂರಾತಿ ಪತ್ರವನ್ನು ವಿತರಣೆ ಮಾಡಿದರು. ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕಿನ ಯೋಜನಾಧಿಕಾರಿ ಜಯಾನಂದ್ ಪಿ. ಉಪಸ್ಥಿತರಿದ್ದರು.