ಬಸ್ಸುಗಳ ಮಧ್ಯೆ ಡಿಕ್ಕಿಯಾದ ಪರಿಣಾಮ ಇಪ್ಪತ್ತಕ್ಕೂ ಅಧಿಕ ಮಂದಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಬೆಂಜನಪದವು ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ.
ಬೆಂಜನಪದವು ಸಮೀಪದ ಕಲ್ಪನೆ ತಿರುವಿನಲ್ಲಿ ಈ ಘಟನೆ ನಡೆದಿದ್ದು, ಮೂವರು ಗಂಭೀರ ಸ್ಥಿತಿಯಲ್ಲಿದ್ದು, ಎರಡು ಬಸ್ಸುಗಳ ಇಪ್ಪತ್ತ ಕ್ಕೂ ಅಧಿಕ ಮಂದಿಗೆ ಗಾಯಗಳಾಗಿದೆ. ಗಾಯಗೊಂಡ ಎಲ್ಲರನ್ನು ತುಂಬೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಿಸಿ ರೋಡಿನಿಂದ ಪೊಳಲಿ ಕಡೆಗೆ ಹೋಗುವ ಸರ್ವೀಸ್ ಬಸ್ ಗೆ ಮದುವೆ ಕಾರ್ಯಕ್ರಮಕ್ಕೆ ತೆರಳಿ ವಾಪಸು ಹೋಗುತ್ತಿದ್ದ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರಣ ಎದುರಿನ ಬಸ್ ಚಾಲಕನ ನಿಯಂತ್ರಣ ತಪ್ಪಿ ಮೂರು ಪಲ್ಟಿಯಾಗಿ ವಾಪಸು ನೇರವಾಗಿ ನಿಂತಿದೆ.
ಹಿಂಬದಿಯಿಂದ ಡಿಕ್ಕಿ ಹೊಡೆದ ಬಸ್ ವಿದ್ಯುತ್ ಕಂಬಕ್ಕೆ ವಾಪಾಸು ಡಿಕ್ಕಿ ಹೊಡೆದು ರಸ್ತೆ ಬದಿ ಕಂದಕ್ಕೆ ಉರುಳಿ ನಿಂತಿದೆ.
ಬಿಸಿರೋಡಿನ ಸ್ಪರ್ಶ ಕಲಾ ಮಂದಿರಕ್ಕೆ ಬಜಪೆಯಿಂದ ಮದುಮಗಳ ದಿಬ್ಬಣವನ್ನು ಕರೆದುಕೊಂಡ ಬಂದ ಬಸ್ ಮದುವೆ ಮುಗಿಸಿ ವಾಪಾಸು ಹೋಗುವ ವೇಳೆ ಈ ಘಟನೆ ನಡೆದಿದೆ.

ಡಿಕ್ಕಿಗೆ ಸ್ಪಷ್ಟವಾದ ಕಾರಣ ಇನ್ನು ತಿಳಿದು ಬಂದಿಲ್ಲ, ಆದರೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬಸ್ ನ ಚಾಲಕ ಅತಿಯಾದ ವೇಗವೇ ಕಾರಣ ವೆನ್ನಲಾಗಿದೆ. ಆತ ಅಮಲು ಪದಾರ್ಥ ಸೇವಿಸಿ ಚಾಲನೆ ಮಾಡುತ್ತಿದ್ದ ಎನ್ನಲಾಗಿದ್ದು, ಪೋಲೀಸರ ತನಿಖೆಯ ಬಳಿಕವಷ್ಟೆ ತಿಳಿಯಬೇಕಾಗಿದೆ.
ಸ್ಥಳದಲ್ಲಿ ಗಾಯಗೊಂಡ ಎಲ್ಲರನ್ನೂ ತುಂಬೆ ಆಸ್ಪತ್ರೆಗೆ ದಾಖಲಿಸಿ ಸೂಕ್ತವಾದ ಚಿಕಿತ್ಸೆ ನೀಡಲು ಹಾಗೂ ಅಗತ್ಯವಿದ್ದಲ್ಲಿ ಮಂಗಳೂರು ಆಸ್ಪತ್ರೆಗೆ ದಾಖಲು ಮಾಡುವಂತೆ ತಹಶೀಲ್ದಾರ್ ರಶ್ಮಿ ಎಸ್. ಆರ್.ಹಾಗೂ ಪೋಲೀಸರಿಗೆ ಶಾಸಕ ರಾಜೇಶ್ ನಾಯ್ಕ್ ಸೂಚಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಸ್ಥಳದಲ್ಲಿ ಬಂಟ್ವಾಳ ನಗರ ಠಾಣಾ ಎಸ್. ಐ.ಅವಿನಾಶ್, ಟ್ರಾಫಿಕ್ ಎಸ್. ಐ.ರಾಮ ನಾಯ್ಕ ಹಾಗೂ ಸಿಬ್ಬಂದಿಗಳು ಪರಿಸ್ಥಿತಿ ನಿಯಂತ್ರಣ ಮಾಡುತ್ತಿದ್ದರು. ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆ ಜನ ತಂಡಪೋತಂಡವಾಗಿ ಅಗಮಿಸಿ ಕೆಲ ಹೊತ್ತು ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here