ಬಂಟ್ವಾಳ: ವೀರಕಂಬ ಮಜಿ ದ.ಕ.ಜಿ.ಪಂ.ಹಿ.ಪ್ರಾ. ಶಾಲಾ ಮಕ್ಕಳ ಶನಿವಾರದ ಬ್ಯಾಗ್ ರಹಿತ ದಿನದ ಅಂಗವಾಗಿ ಪಠ್ಯೇತರ ಚಟುವಟಿಕೆಯಾಗಿ ಬೆಂಕಿಯಿಲ್ಲದೆ ತಯಾರಿಸುವ ವಿವಿಧ ತಿನಿಸುಗಳನ್ನು ತಯಾರಿಸಿದರು.
ಕಾರ್ಯಕ್ರಮದಲ್ಲಿ ಭಾಗವಹಿಸಿದ ಜಿ.ಪಂ. ಸದಸ್ಯೆ ಮಂಜುಳಾ ಮಾಧವ ಮಾವೆ, ಗ್ರಾ.ಪಂ. ಸದಸ್ಯ ರಾಮಚಂದ್ರ ಪ್ರಭು, ಮಕ್ಕಳು ತಯಾರಿಸಿದ ತಿನಿಸುಗಳ ರುಚಿ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಮಕ್ಕಳು ಸುಮಾರು 30 ಬಗೆಯ ತಿನಿಸುಗಳನ್ನು ತಯಾರಿಸಿದ್ದರು. ಯಾರ ಸಹಕಾರವೂ ಪಡೆಯದೇ ಮಕ್ಕಳೇ ತಯಾರಿಸಿದ್ದು ವಿಶೇಷವಾಗಿತ್ತು. ಆ ತಿನಿಸುಗಳನ್ನು ವಿಶೇಷವಾಗಿ ಅಲಂಕರಿಸಿ ಜೋಡಿಸಲ್ಪಟ್ಟಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಶಾಲಾ ಶಿಕ್ಷಕಿಯರು ಮಕ್ಕಳಿಗೆ ಸೂಕ್ತ ಮಾರ್ಗದರ್ಶನ ನೀಡಿದರು.