


ಬಂಟ್ವಾಳ: ರೈಲು ಹಳಿಯ ಪುಟ್ ಬಾತ್ ನಲ್ಲಿ ಗಂಡಸಿನ ಮೃತದೇಹವೊಂದು ಪತ್ತೆಯಾಗಿದ್ದು, ಮೃತದೇಹವನ್ನು ರೈಲ್ವೆ ಪೋಲೀಸರು ವೆನ್ಲಾಕ್ ಆಸ್ಪತ್ರೆಯ ಶವಗಾರದಲ್ಲಿರಿಸಿದ್ದಾರೆ.
ಬಿಸಿರೋಡಿನ ರೈಲ್ವೆ ಮೇಲ್ಸೇತಯವೆಯ ಅಡಿ ಭಾಗದಲ್ಲಿ ರೈಲ್ವೆ ಹಳಿಯ ಮೇಲೆ ನಡೆದುಕೊಂಡು ಹೋಗುವ ವೇಳೆ ರೈಲು ಡಿಕ್ಕಿ ಹೊಡೆದು ಮೃತಪಟ್ಟಿದ್ದಾರಾ ಅಥವಾ ಆತ್ಮಹತ್ಯೆ ಮಾಡಿಕೊಂಡಿದ್ದಾರಾ ಎಂಬುದು ತನಿಖೆಯ ಬಳಿಕ ತಿಳಿಯಬೇಕಾಗಿದೆ.
ಮೃತರನ್ನು ಬಿಸಿರೋಡಿನ ಬಿ.ಮೂಡ ಗ್ರಾಮದ ಅಲೆತ್ತೂರು ನಿವಾಸಿ ಮೋಹನ್ ಶೆಟ್ಟಿ (37) ಎಂದು ಗುರುತಿಸಲಾಗಿದೆ.
ಸುಮಾರು 7.30 ರ ವೇಳೆ ಬಿಸಿರೋಡಿನ ರೈಲ್ವೆ ಮೇಲ್ಸೇತುವೆಯ ಕೆಲಭಾಗದ ರೈಲು ಹಳಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಇದನ್ನು ಗಮನಿಸಿದ ಸಾರ್ವಜನಿಕ ರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ತಿಳಿಸಿದ್ದಾರೆ. ನಗರ ಪೋಲೀಸರು ರೈಲ್ವೆ ಪೋಲೀಸರಿಗೆ ಮಾಹಿತಿ ನೀಡಿದ್ದಾರೆ.
ರೈಲ್ವೆ ಪೋಲೀಸರು ಮೃತದೇಹವನ್ನು ವೆನ್ಲಾಕ್ ಆಸ್ಪತ್ರೆಯ ಶವಗಾರದಲ್ಲಿ ಇಡಲಾಗಿದೆ.


