ಉಜಿರೆ: ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ (ಬಾಹುಬಲಿ ಬೆಟ್ಟ) ವಿರಾಜಮಾನರಾಗಿರುವ ಭಗವಾನ್ ಬಾಹುಬಲಿ ಸ್ವಾಮಿಗೆ ಮಂಗಳವಾರ ಭವ್ಯಅಗ್ರೋದಕ ಮೆರವಣಿಗೆ ಬಳಿಕ 216 ಕಲಶಗಳಿಂದ ಪಾದಾಭಿಷೇಕ ನಡೆಯುತ್ತದೆ.
ಕಾರ್ಕಳ ಜೈನಮಠದ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಮಂಗಲ ಪ್ರವಚನ ನೀಡುವರು.
ಇದಕ್ಕೆ ಪೂರ್ವಭಾವಿಯಾಗಿ ಸೋಮವಾರ ರತ್ನಗಿರಿಯಲ್ಲಿ ತೋರಣ ಮುಹೂರ್ತ, ವಿಮಾನಶುದ್ಧಿ, ನಾಂದಿ ಮಂಗಲ ಮೊದಲಾದಧಾರ್ಮಿಕ ವಿಧಿ-ವಿಧಾನಗಳು ನಡೆದವು.