ಉಜಿರೆ: ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಾರ್ಷಿಕ ಪೂಜಾ ಮಹೋತ್ಸವದ ಅಂಗವಾಗಿ ಬುಧವಾರ ತೋರಣ ಮುಹೂರ್ತ, ವಿಮಾನ ಶುದ್ಧಿ, ನಾಂದಿ ಮಂಗಲ, ವಾಸ್ತು ಪೂಜಾ ವಿಧಾನ, ನವಗ್ರಹ ಮಹಾಶಾಂತಿ, ಗ್ರಾಮ ಬಲಿ ವಿಧಾನ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆದವು.
ಪೂಜ್ಯ ದಿವ್ಯ ಸಾಗರ್‌ಜಿ ಮುನಿ ಮಹಾರಾಜರ ದಿವ್ಯ ಉಪಸ್ಥಿತಿಯಲ್ಲಿ ನಡೆದ ಸಮಾರಂಭದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಹೇಮಾವತಿ ವಿ. ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್ ಮತ್ತು ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ. ಯಶೋವರ್ಮ ಉಪಸ್ಥಿತರಿದ್ದರು.
————
ಶಾಸನಶಾಸ್ತ್ರ: ಧರ್ಮಸ್ಥಳದಲ್ಲಿ ವಿಚಾರ ಸಂಕಿರಣ
ಉಜಿರೆ: ಧರ್ಮಸ್ಥಳದಲ್ಲಿ ವಸಂತ ಮಹಲ್‌ನಲ್ಲಿ ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಸಹಭಾಗಿತ್ವದಲ್ಲಿ ಇದೇ 28 ಮತ್ತು 29 ರಂದು (ಶುಕ್ರವಾರ ಮತ್ತು ಶನಿವಾರ) ಶಾಸನಶಾಸ್ತ್ರದ ಬಗ್ಯೆ ವಿಚಾರ ಸಂಕಿರಣ ಆಯೋಜಿಸಲಾಗಿದೆ.
ಶುಕ್ರವಾರ ಬೆಳಿಗ್ಗೆ ಹತ್ತು ಗಂಟೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ವಿಚಾರ ಸಂಕಿರಣವನ್ನು ಉದ್ಘಾಟಿಸುವರು.
ಶನಿವಾರ ಸಂಜೆ ನಾಲ್ಕು ಗಂಟೆಗೆ ನಡೆಯುವ ಸಮಾರಂಭದಲ್ಲಿ ಹೇಮಾವತಿ ವಿ. ಹೆಗ್ಗಡೆಯವರು ಸಮಾರೋಪ ಭಾಷಣ ಮಾಡುವರು.
ಶುಕ್ರವಾರ ಮತ್ತು ಶನಿವಾರ ಅಮೃತವರ್ಷಿಣಿ ಸಭಾಭವನದಲ್ಲಿ ದೇಶದ ವಿವಿಧ ಭಾಗಗಳ ಶಾಸನಗಳ ಪ್ರದರ್ಶನ ಆಯೋಜಿಸಿದ್ದು ವೀಕ್ಷಣೆಗೆ ಉಚಿತ ಅವಕಾಸವಿದೆ ಎಂದು ಸಂಘಟಕರು ತಿಳಿಸಿದ್ದಾರೆ.