


ಬಂಟ್ವಾಳ: ಇರಾ ಗ್ರಾಮ ಪಂಚಾಯತ್ ನ 2019-20ನೇ ಸಾಲಿನ ಗ್ರಾಮ ಸಭೆಯು ಇರಾ ಮಲೆಯಾಳಿ ಬಿಲ್ಲವ ಸಭಾ ಭವನದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ಅಧ್ಯಕ್ಷತೆಯಲ್ಲಿ ನಡೆಯಿತು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿಟ್ಲ ಸುಧಾ ಜೋಷಿ ನೋಡೆಲ್ ಅಧಿಕಾರಿಗಳಾಗಿ ಪಾಲ್ಗೊಂಡರು. ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮ ಇಲಾಖಾ ಮಾಹಿತಿ ನೀಡಿದರು. 5 ವರ್ಷಗಳ ಆಡಳಿತ ಅವದಿಯ ಕೊನೆಯ ಗ್ರಾಮ ಸಭೆಯಲ್ಲಿ ಗ್ರಾಮದ ಅಭಿವೃದ್ಧಿಯಲ್ಲಿ ಸಹಕರಿಸಿದ ಎಲ್ಲಾ ಜನಪ್ರತಿನಿದಿಗಳಿಗೆ, ಅಧಿಕಾರಿಗಳಿಗೆ, ಗ್ರಾಮಸ್ಥರಿಗೆ, ಪಂಚಾಯತ್ ಸಿಬ್ಬಂದಿ ವರ್ಗಕ್ಕೆ, ಗ್ರಾಮ ಪಂಚಾಯತ್ ಅಧ್ಯಕ್ಷರು ಕೃತಜ್ಞತೆ ಸಲ್ಲಿಸಿದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಶೀಲ ಸ್ವಾಗತಿಸಿ, ಕಾರ್ಯದರ್ಶಿ ನಳಿನಿ ಎ.ಕೆ. ವಂದಿಸಿದರು.


