Saturday, April 6, 2024

ವಸ್ತು ಪ್ರದರ್ಶನ ಉದ್ಘಾಟನೆ

ಧರ್ಮಸ್ಥಳ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಇತಿಹಾಸ ವಿಭಾಗದ ಸಹಯೋಗದೊಂದಿಗೆ ಏರ್ಪಟ್ಟ ಭಾರತೀಯ ಪುರಾಭಿಲೇಖ ಸಂಸ್ಥೆಯ 45ನೇ ವಾರ್ಷಿಕ ಅಧಿವೇಶನ ಮತ್ತು ಭಾರತೀಯ ಸ್ಥಳನಾಮ ಸಂಸ್ಥೆಯ 39ನೇ ವಾರ್ಷಿಕ ಸಮಾವೇಶದ ಎರಡು ದಿನಗಳ ಜಂಟಿ ಅಧಿವೇಶನ ಪ್ರಯುಕ್ತ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಆಯೋಜಿಸಿದ್ದ ವಸ್ತು ಪ್ರದರ್ಶನವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೆಂದ್ರ ಹೆಗ್ಗಡೆ ಉದ್ಘಾಟಿಸಿ ವೀಕ್ಷಿಸಿದರು.

ವಸ್ತು ಪ್ರದರ್ಶನದಲ್ಲಿ ದೇಶದ ಅತ್ಯಂತ ಪ್ರಾಚೀನ ಶಾಸನ, ಅಶೋಕ ಶಾಸನ, ಹಿಂದಿನ ಕಾಲದಿಂದ ಪ್ರಸ್ತುತದವರೆಗಿನ ಶಾಸನ, ಉದ್ದರಣೆ ಸಾಹಿತ್ಯ, ಪ್ರಾಚೀನ ಭಾರತದ ಲಿಪಿಗಳು, ನಾಣ್ಯಗಳು, ಭಾರತೀಯ ಮಹಾಕಾವ್ಯಗಳು ಕಂಚಿ ಶಾಸನ, ಗುಹಾ ಶಾಸನದ ಛಾಯಚಿತ್ರಗಳನ್ನು ಪ್ರದರ್ಶಿಸಲಾಯಿತು.
ಈ ಸಂದರ್ಭಲ್ಲಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ಬಿ.ಯಶೋವರ್ಮ, ಎಸ್.ಡಿ.ಎಂ ಕಾಲೇಜಿನ ಪ್ರಾಂಶುಪಾಲ ಡಾ.ಸತೀಶ್ಚಂದ್ರ ಉಪಸ್ಥಿತರಿದ್ದರು.

More from the blog

ರಾಜ್ಯದಲ್ಲಿ 60 ಮಂದಿಯ ನಾಮಪತ್ರ ತಿರಸ್ಕೃತ

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 358 ಅಭ್ಯರ್ಥಿಗಳು 492 ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 13 ಕ್ಷೇತ್ರದಲ್ಲಿ ಪರಿಶೀಲನೆ ಕಾರ್ಯ ಮುಗಿದಿದೆ. 276 ನಾಮಪತ್ರಗಳು ಕ್ರಮಬದ್ಧವಾಗಿದ್ದು, 60 ನಾಮಪತ್ರಗಳು...

ಹೆರಿಗೆ ವೇಳೆ ವಿಪರೀತ ರಕ್ತಸ್ರಾವ : ಲಾಯಿಲದ ಮಹಿಳೆ ಸಾವು

ಬೆಳ್ತಂಗಡಿ: ಹೆರಿಗೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ತೀವ್ರ ರಕ್ತ ಸ್ರಾವದಿಂದ ಸಾವನ್ನಪ್ಪಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬದ್ಯಾರ್ ಖಾಸಗಿ ಆಸ್ಪತ್ರೆಯಲ್ಲಿ ಲಾಯಿಲ ಗ್ರಾಮದ ಗಾಂಧಿನಗರ ನಿವಾಸಿ ಗಾಯತ್ರಿ ಎಂಬವರು ಎರಡನೇ...

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...