ಬಂಟ್ವಾಳ: ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾಗಿ ವಾಗ್ಮಿ, ಚಿಂತಕ, ಬಿಲ್ಲವ ಮುಖಂಡ ಹರಿಕೃಷ್ಣ ಬಂಟ್ವಾಳ ಆಯ್ಕೆಯಾಗಿದ್ದಾರೆ.
ಜಿಲ್ಲಾ ಬಿಜೆಪಿ ವಕ್ತಾರರಾಗಿ ಕಳೆದ ಅವಧಿಯಲ್ಲಿ ಕೆಲಸ ಮಾಡಿದ ಹರಿಕೃಷ್ಣ ಬಂಟ್ವಾಳ ಅವರಿಗೆ ಪ್ರಸಕ್ತ ಅವಧಿಯಲ್ಲಿ ಬಿಜೆಪಿಯ ಜಿಲ್ಲಾ ಉಪಾಧ್ಯಕ್ಷ ಜವಬ್ದಾರಿಯನ್ನು ಹೆಗಲಿಗೆ ವಹಿಸಿಕೊಡಲಾಗಿದೆ. ನಾಯಕತ್ವ, ಪಕ್ಷ ಸಂಘಟನೆ, ಸಾಮಾಜಿಕ ಚಟುವಟಿಕೆಗಳ ಮೂಲಕ ಪಕ್ಷದಲ್ಲಿ ಮುಂಚೂಣಿಯಲ್ಲಿದ್ದ ಬಂಟ್ವಾಳ ಅವರಿಗೆ ಉಪಾಧ್ಯಕ್ಷ ಪಟ್ಟ.