


ವಿಟ್ಲ: ವಿಟ್ಲ ಶ್ರೀ ವೆಂಕಟರಮಣ ಭಜನಾ ಮಂಡಳಿ ಅರಳೀ ವೃಂದ ಕಡಂಬು ಇದರ 19 ವರ್ಷದ ವಾರ್ಷಿಕೋತ್ಸವ ಫೆ.22 ರಂದು ಕಡಂಬು ಮಂದಿರದ ವಠಾರದಲ್ಲಿ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಶಾಸಕ ರಾಜೇಶ್ ನಾಯ್ಕ ಉಳಿಪ್ಪಾಡಿಗುತ್ತು, ಜಿಲ್ಲಾ ಪಂಚಾಯಿತಿ ಸದಸ್ಯೆ ಮಂಜುಳಾ ಮಾವೆ, ವಿಟ್ಲ ಪಡ್ನೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ರವೀಶ್ ಶೆಟ್ಟಿ ಕರ್ಕಳ ಭಾಗವಹಿಸಲಿದ್ದಾರೆ.
ಶ್ರೀ ವೆಂಕಟರಮಣ ಭಜನಾ ಮಂಡಳಿ ಅಧ್ಯಕ್ಷ ಆನಂದ ಸೊರಂಗದ ಮೂಲೆ ಅಧ್ಯಕ್ಷತೆ ವಹಿಸಲಿದ್ದಾರೆ. ಗೌರವಾಧ್ಯಕ್ಷ ನೋಣಯ್ಯ ಜಿ. ಎನ್., ಆಡಳಿತ ಮೊಕ್ತೇಸರ ಬಾಬು ಭಾಗವಹಿಸುವರು.
ಈ ಸಂದರ್ಭದಲ್ಲಿ ಶ್ರೀ ಸತ್ಯನಾರಾಯಣ ಪೂಜೆ, ನಾನಾ ಭಜನಾ ತಂಡಗಳಿಂದ ಭಜನೆ, ಕನ್ನಡ ಮತ್ತು ಸಾಂಸ್ಕೃತಿಕ ಇಲಾಖಾ ಸಹಯೋಗದೊಂದಿಗೆ ಯುವ ಫ್ರೆಂಡ್ಸ್ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮ, ಶ್ರೀ ವನದುರ್ಗ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ದೇಂತಡ್ಕ ಇವರಿಂದ ‘ಛತ್ರಪತಿ’ ಎಂಬ ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ.


