


ಬಂಟ್ವಾಳ: ಸಂಸ್ಕಾರಯುತ ಶಿಕ್ಷಣದ ಮೂಲಕ ವಿದ್ಯಾರ್ಥಿಗಳ ಭವಿಷ್ಯವನ್ನು ಬೆಳೆಗಿಸುವುದು ಹಾಗೂ ವಿದ್ಯಾರ್ಥಿಗಳ ಪ್ರತಿಭೆಗಳನ್ನು ಉತ್ತೇಜಿಸುವುದರ ಮೂಲಕ ಅವರಲ್ಲಿ ಆತ್ಮವಿಶ್ವಾಸವನ್ನು ಮೂಡಿಸುವುದು ಶ್ರೀರಾಮ ವಿದ್ಯಾಕೇಂದ್ರದ ಉದ್ದೇಶ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ| ಪ್ರಭಾಕರ್ ಭಟ್ ಕಲ್ಲಡ್ಕ ಹೇಳಿದರು.
ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದ 2019-20ನೇ ಸಾಲಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆಯಲ್ಲಿ ಅವರು ಮಾತನಾಡಿದರು.
ಶ್ರೀರಾಮ ಪದವಿ ಕಾಲೇಜಿನ ಪ್ರಾಂಶುಪಾಲ ಕೃಷ್ಣಪ್ರಸಾದ್ ಕಾಯರ್‌ಕಟ್ಟೆ ಹಾಗೂ ವಿವೇಕಾನಂದ ತಾಂತ್ರಿಕ ಮಹಾವಿದ್ಯಾಲಯದ ಸಂಯೋಜಕ ಶ್ರೀ. ವಿವೇಕ್ ರಂಜನ್ ಭಂಡಾರಿ ಅವರು ತಮ್ಮ ವಿದ್ಯಾಸಂಸ್ಥೆಗಳ ಬಗ್ಗೆ ಪೋಷಕರಿಗೆ ಮಾಹಿತಿ ನೀಡಿದರು. ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕ ವಸಂತ ಮಾಧವ ಉಪಸ್ಥಿತರಿದ್ದರು.
ಪದವಿಪೂರ್ವ ವಿಭಾಗದ ಪ್ರಾಂಶುಪಾಲ ವಸಂತ ಬಲ್ಲಾಳ್ ಪ್ರಸ್ತಾವಿಸಿ, ಸ್ವಾಗತಿಸಿದರು. ಗಣಕಶಾಸ್ತ್ರ ಉಪನ್ಯಾಸಕಿ ಚೈತನ್ಯ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.


