ಬಂಟ್ವಾಳ: ತ್ರಿಪದಿಗಳ ಮೂಲಕ ನೈತಿಕ ಮೌಲ್ಯಗಳನ್ನು ಸಾರಿದ ಮಹಾನುಭಾವ ಸರ್ವಜ್ಞ, ಇಂತಹಾ ಮಹಾನುಭವರ ಆದರ್ಶಗಳನ್ನು ಮುಂದಿನ ಜನಾಂಗಕ್ಕೂ ತಿಳಿಸಿಕೊಡುವ ಕೆಲಸ ಆಗಬೇಕಿದೆ ಎಂದು ಬಂಟ್ವಾಳ ಎಸ್.ವಿ.ಎಸ್.ಕಾಲೇಜಿನ ಉಪನ್ಯಾಸಕಿ ಕವಿತಾ ಯಾದವ್ ಹೇಳಿದರು. ಅವರು ಇಂದು ಮಿನಿ ವಿಧಾನಸೌಧದ ಕಚೇರಿಯಲ್ಲಿ ನಡೆದ ತಾಲೂಕು ಮಟ್ಟದ ಕವಿ ಸರ್ವಜ್ಞ ಜಯಂತಿ ಆಚರಣೆ ಸಂದರ್ಭದಲ್ಲಿ ಮಾತನಾಡಿದರು.
ಕೇಂದ್ರ ಸ್ಥಾನೀಯ ಉಪತಹಶೀಲ್ದಾರ್ ರಾಧಾಕೃಷ್ಣ ದೀಪ ಪ್ರಜ್ವಲಿಸಿದರು. ಕುಲಾಲ ಯುವ ವೇದಿಕೆ ಗೌರವಾಧ್ಯಕ್ಷ ನಾರಾಯಣ ಸಿ. ಪೆರ್ನೆ, ಪುರಸಭಾ ಸದಸ್ಯ ಹರಿಪ್ರಸಾದ್, ಉಪ ತಹಶೀಲ್ದಾರ್ ಶ್ರೀಧರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಮುಖರಾದ ಸದಾಶಿವ ಬಂಗೇರ, ಜಯರಾಜ್ ಎಸ್.ಬಂಗೇರ, ಮಚ್ಛೇಂದ್ರ ಸಾಲಿಯಾನ್, ಉಪತಹಶೀಲ್ದಾರ್ ರೂಪೇಶ್, ಶ್ರೀನಿವಾಸ್, ರಾಜೇಶ್ ನಾಯ್ಕ್, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಶುಕುಮಾರ್ ಉಪಸ್ಥಿತರಿದ್ದರು. ಬಂಟ್ವಾಳ ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು ಸ್ವಾಗತಿಸಿ, ವಂದಿಸಿದರು.
ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಕಾರ್ಯಕ್ರಮ ನಿರೂಪಿಸಿದರು.