ಬಂಟ್ವಾಳ: ಪಾಣೆಮಂಗಳೂರಿಗೆ ಸಮೀಪದ ನಂದಾವರ ಶ್ರೀವಿನಾಯಕ ಶಂಕರನಾರಾಯಣ ದುರ್ಗಾಂಬ ಕ್ಷೇತ್ರದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಫೆ.21 ಸೂರ್ಯೋದಯದಿಂದ ಫೆ.22ರ ಸೂರ್ಯೋದಯದ ವರೆಗೆ ಏಕಾಹ ಭಜನೆ ನಡೆಯಲಿದೆ ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಎ.ಸಿ.ಭಂಡಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈಗಾಗಲೇ ಕ್ಷೇತ್ರದ ಭಜನಾ ಮಂಡಳಿಯ ಜೊತೆಗೆ ವಿವಿಧ ಭಾಗದ ಭಜನಾ ಮಂಡಳಿಗಳು ಭಜನಾ ಸೇವೆಯನ್ನು ಸಲ್ಲಿಸಲಿದ್ದಾರೆ ಭಗವದ್ಬಕ್ತರು ಮಹಾಶಿವರಾತ್ರಿಯ ಈ ಭಜನಾ ಸೇವೆಯಲ್ಲಿ ಪಾಲ್ಗೊಳ್ಳುವಂತೆ ಅವರು ಕೋರಿದ್ದಾರೆ.