ಬಂಟ್ವಾಳ: ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆ ಯಾಗಿ ರಾಜ್ಯಸರಕಾರ ಘೋಷಣೆ ಮಾಡಬೇಕು ಎಂದು ತುಳು ಸಾಹಿತ್ಯ ಅಕಾಡೆಮಿ ಮೂಲಕ ದ.ಕ.ಜಿಲ್ಲೆಯ ಎಲ್ಲಾ ಶಾಸಕರ ಮನವಿಯನ್ನು ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ನೇತ್ರತ್ವದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಲ್ಲಿಸಲಾಗಿದೆ.
ತುಳು ಭಾಷೆಯನ್ನು ದೇಶದ ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಬೇಕು ಎನ್ನುವುದು ಸಮಸ್ತ ತುಳುವರ ಹಲವು ವರ್ಷಗಳ ಬೇಡಿಕೆಯಾಗಿರುತ್ತದೆ. ಇದಕ್ಕೆ ಪೂರಕವಾಗಿ ರಾಜ್ಯ ಸರಕಾರವು ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡುವುದು ಅಗತ್ಯವಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.