Sunday, April 7, 2024

ಶ್ರೀರಾಮ ಪದವಿ ಕಾಲೇಜಿನಲ್ಲಿ ಮಾತೃ ಭಾಷಾ ದಿವಸ್ ಆಚರಣೆ

ಬಂಟ್ವಾಳ: ಹೆಸರಾಯಿತು ಕರ್ನಾಟಕ ಉಸಿರಾಯಿತು ಕನ್ನಡ ಎಂಬಂತೆ, ಮಾತೃ ಬಾಷೆಯ ಬೆಳವಣಿಗೆಯಿಂದ ನಮ್ಮ ಸಂಸ್ಕೃತಿ ಮತ್ತು ಭಾಷಾ ಬೆಳವಣಿಗೆಯು ವೃದ್ಧಿಯಾಗುವುದು. ಮಾತೃ ಭಾಷೆಯ ಆಚರಣೆ ಮತ್ತು ಬಳಕೆ ಕೇವಲ ಒಂದು ದಿನಕ್ಕೆ ಸೀಮಿತವಾಗದೆ ನಿತ್ಯ ನಿರಂತರ ಬೆಳಗುತ್ತಾ ಇರಬೇಕು ಎಂದು ಶ್ರೀರಾಮ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಅಶೋಕ್ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯಕ್ರಮದ ಮಹತ್ವವನ್ನು ತಿಳಿಸಿದರು.


ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನ ಪ್ರಜ್ಞಾನ ಸಾಹಿತ್ಯ ಸಂಘ ಏರ್ಪಡಿಸಿದ ‘ಮಾತೃ ಭಾಷಾ ದಿವಸ್’ ಎಂಬ ಕಾರ್ಯಕ್ರಮದಲ್ಲಿ ಅವರು ಆಂಗ್ಲ ಭಾಷೆಯ ವ್ಯಾಮೋಹದ ಪ್ರತಿಷ್ಠೆಯಿಂದ ಮಾತೃ ಭಾಷೆಯು ಮೂಲೆಗುಂಪಾಗಿರುವುದು ವಿಪರ್ಯಾಸ. ಆದರೆ ದಿನಬಳಕೆಯಲ್ಲಿ ಮಾತೃ ಭಾಷೆಯು ಹೆಬ್ಬಾಗಿಲಿನಂತೆಯೂ, ಇತರ ಭಾಷೆಯು ಗಾಳಿ ಬೆಳಕಿಗಾಗಿ ಕಿಟಕಿಯನ್ನು ತೆರೆದಿಡುವಂತೆಯೇ ಬಳಸಬೇಕು ಎಂದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀರಾಮ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವಸಂತ ಬಲ್ಲಾಳ್ ವಹಿಸಿದ್ದರು. ವೇದಿಕೆಯಲ್ಲಿ ಪದವಿ ಕಾಲೇಜಿನ ಪ್ರಾಂಶುಪಾಲ ಕೃಷ್ಣಪ್ರಸಾದ ಕಾಯರ್‌ಕಟ್ಟೆ ಉಪಸ್ಥಿತರಿದ್ದರು. ಅಂತಿಮ ಬಿಕಾಂ ವಿದ್ಯಾರ್ಥಿನಿಯರಾದ ಹೇಮಲತಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.ಸುಭಾಷಿಣಿ ವಂದಿಸಿದರು.

More from the blog

ಪ್ರಶಾಂತ್ ಪುಂಜಾಲಕಟ್ಟೆ ಅವರಿಗೆ ಪಿತೃ ವಿಯೋಗ

ಬಂಟ್ವಾಳ: ನಮ್ಮ ಬಂಟ್ವಾಳ ಸಮೂಹ ಸಂಸ್ಥೆಯ ಮಾಲಕರಾದ ಪ್ರಶಾಂತ್ ಪುಂಜಾಲಕಟ್ಟೆ ಅವರ ತೀರ್ಥರೂಪರು, ಕುಕ್ಕಳ ಗ್ರಾಮದ ಪುಂಜಾಲಕಟ್ಟೆ ನಿವಾಸಿ ಸಂಜೀವ ಪೂಜಾರಿ( 83) ಅವರು ಅಲ್ಪಕಾಲದ ಅಸೌಖ್ಯದಿಂದ ಎ.6ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...