ಬಂಟ್ವಾಳ: ಬಂಟ್ವಾಳ ತಾಲೂಕು ಪಿಲಾತಬೆಟ್ಟು ಗ್ರಾಮ ನಯನಾಡು ಕಲ್ಲುಬೆಟ್ಟು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವವು ಫೆ.13ರಂದು ಜರಗಲಿದೆ.
ಬೆಳಗ್ಗೆ ದೇವರ ಪ್ರಾರ್ಥನೆ, ತೋರಣ ಮುಹೂರ್ತ, ಪುಣ್ಯಾಹವಾಚನ, ನವಕ ಪ್ರಧಾನ, ಪಂಚಾಮೃತ ಅಭಿಷೇಕ, ಕಲಶಾಭಿಷೇಕ, ಅಲಂಕಾರ ಪೂಜೆ, ಮಹಾಪೂಜೆ, ಮಧ್ಯಾಹ್ನ ಶ್ರೀ ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ ಪ್ರಸಾದ, ಪಲ್ಲಪೂಜೆ, ತೀರ್ಥಪ್ರಸಾದ, ಅನ್ನಸಂತರ್ಪಣೆ, ಸಂಜೆ ದೈವಗಳಿಗೆ ಪರ್ವಸೇವೆ, ಭಜನೆ, ರಾತ್ರಿ ಶ್ರೀರಂಗಪೂಜೆ-ಶ್ರೀ ದೇವರ ಉತ್ಸವ ಬಲಿ, ಸೇವೆಗಳು, ಮಹಾಪೂಜೆ,ಅನ್ನಸಂತರ್ಪಣೆ ನಡೆಯಲಿದೆ.