Thursday, April 18, 2024

ಫೆ.24ರಿಂದ 29 ರವರೆಗೆ ಒಡ್ಡೂರು ಧರ್ಮಚಾವಡಿಯಲ್ಲಿ ಶ್ರೀ ಕೊಡಮಣಿತ್ತಾಯ ಧರ್ಮದೈವದ ಪ್ರತಿಷ್ಠೆ, ಶತಚಂಡಿಕಾಯಾಗ ಹಾಗೂ ಧರ್ಮ ನೇಮೋತ್ಸವ

ಬಂಟ್ವಾಳ : ಒಡ್ಡೂರು ಧರ್ಮಚಾವಡಿಯಲ್ಲಿ ಶ್ರೀ ಕೊಡಮಣಿತ್ತಾಯ ಧರ್ಮದೈವದ ಪ್ರತಿಷ್ಠೆ, ಶತಚಂಡಿಕಾಯಾಗ ಹಾಗೂ ಧರ್ಮ ನೇಮೋತ್ಸವವು ಫೆ.24ರಿಂದ 29 ರವರೆಗೆ ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆಯಲಿದೆ ಎಂದು ಬಂಟ್ಬಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದ್ದಾರೆ.
ಒಡ್ಡೂರು ವಿನಲ್ಲಿರುವ ತಮ್ಮ ನಿವಾಸದಲ್ಲಿ ಶುಕ್ರವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ಕುಟುಂಬಿಕರು ಆರಾಧಿಸಿಕೊಂಡು ಬಂಸಿರುವ ಕೊಡಮಣಿತ್ತಾಯ ದೈವಕ್ಕೆ ಈ ಬಾರಿ ಒಡ್ಡೂರು ಧರ್ಮಚಾವಡಿಯನ್ನು ನಿರ್ಮಿಸಲಾಗಿದ್ದು, ಫೆ.24 ರಿಂದ ಪ್ರತಿನಿತ್ಯವಧಾರ್ಮಿಕ ವಿಧಿವಿಧಾನಗಳು ನಡೆಯಲಿದೆ. ಫೆ.28 ರ ಶುಕ್ರವಾರ ಪೂರ್ವಾಹ್ನ ಧರ್ಮ ದೈವದ ಪ್ರತಿಷ್ಠೆ ಸಹಿತ ವಿವಿಧ ಧಾರ್ಮಿಕ‌ ಕಾರ್ಯಗಳ ಜೊತೆಯಲ್ಲಿ ಸೂರ್ಯೋದಯದಿಂದಲೇ ವಿವಿಧ ಭಜನಾ ತಂಡಗಳ ಭಜನಾ ಕಾರ್ಯ ಆರಂಭವಾಗಲಿದ್ದು, ಮಾರನೇ ದಿನದ ಸೂರ್ಯೋದಯದ‌ ತನಕ‌ ನಿರಂತರವಾಗಿ 23 ಭಜನಾತಂಡಗಳು ಭಾಗಿಯಾಗಲಿದೆ ಎಂದರು.ಫೆ.29 ರಂದು ಪೂರ್ವಾಹ್ನ ಶತಚಂಡಿಕಾಯಾಗ ಆರಂಭವಾಗಿ 11 ಗಂಟೆಗೆ ಪೂರ್ಣಾಹುತಿಯಾಗಲಿದೆ. ಬಳಿಕ 11.30ಕ್ಕೆ ಕೊಡಮಣಿತ್ತಾಯ ದೈವದ ಭಂಡಾರ ಏರಿ, ಪಲ್ಲ ಪೂಜೆಯ ಬಳಿಕ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ಮಧ್ಯಾಹ್ಮ 2 ರಿಂದ ರಾತ್ರಿ 9 ಗಂಟೆಯ ತನಕ ಯಕ್ಷಗಾನ ವೈಭವ, ಪ್ರಶಂಸ ತಂಡದ ಹಾಸ್ಯ, ಜಾನಪದ ಕಾರ್ಯಕ್ರಮಗಳ ಸಹಿತ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ರಾತ್ರಿ 9 ಗಂಟೆಯಿಂದ ಶ್ರೀ ಕೊಡಮಣಿತ್ತಾಯ ದೈವಕ್ಕೆ ಧರ್ಮ ನೇಮೋತ್ಸವ ನಡೆಯಲಿದೆ ಎಂದು ರಾಜೇಶ್ ನಾಯ್ಕ್‌ ವಿವರಿಸಿದರು.

* ಮುಖ್ಯಮಂತ್ರಿ ಸಹಿತ ಮಂತ್ರಿ-ಶಾಸಕರ‌ ದಂಡು*

ಶತಚಂಡಿಕಾ ಯಾಗ ಹಾಗೂ ಧರ್ಮ ನೇಮೋತ್ಸವ ಕ್ಕೆ ರಾಜ್ಯದ ಮುಖ್ಯಮಂತ್ರಿ ಬಿ.ಎಸ್ . ಯಡಿಯೂರಪ್ಪ ಆಗಮಿಸಲಿದ್ದಾರೆ. ಶತಚಂಡಿಕಾಯಾಗ ಪೂರ್ಣಾಹುತಿಯ ಸಂದರ್ಭ ಅವರು ಧರ್ಮ ಚಾವಡಿ ಗೆ ಭೇಟಿ‌ ನೀಡಲಿದ್ದಾರೆ. ಮಾನ್ಯ ಮುಖ್ಯಮಂತ್ರಿ ಗಳ ಜೊತೆಯಲ್ಲಿ ಉಪಮುಖ್ಯಮಂತ್ರಿಗಳು ಹತ್ತಕ್ಕೂ ಅಧಿಕ ಮಂತ್ರಿಗಳು, ಉಭಯ ಸದನಗಳ ಸಭಾಧ್ಯಕ್ಷರು, 40ಕ್ಕೂ ಅಧಿಕ ಶಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದವರು‌ ತಿಳಿಸಿದರು.

50 ಸಾವಿರಕ್ಕೂ ಅಧಿಕ ಜನಸ್ತೋಮದ‌ ನಿರೀಕ್ಷೆ
ಧರ್ಮ ನೇಮೋತ್ಸವದ ದಿನದ ಕಾರ್ಯಕ್ರಮಕ್ಕೆ ತಾಲೂಕು ಸಹಿತ ಜಿಲ್ಲೆಯ ವಿವಿಧೆಡೆಯಿಂದ 50 ಸಾವಿರಕ್ಕೂ ಅಧಿಕ ಜನರು ಭಾಗವಹಿಸುವ ನಿರೀಕ್ಷೆ ಇದ್ದು, ಸೂಕ್ತ ಸಿದ್ಧತೆಗಳನ್ನು ನಡೆಸಲಾಗಿದೆ. ಒಡ್ಡೂರು ಗ್ರಾಮದ ಆಸುಪಾಸಿನ ಊರುಗಳಿಂದ ಹಾಗೂ ಬಂಟ್ವಾಳ ತಾಲೂಕಿನಿಂದ ಸುಮಾರು 3ಸಾವಿರಕ್ಕೂ ಅಧಿಕ ಸ್ವಯಂ ಸೇವಕರನ್ನು‌ ನಿಯೋಜಿಸಲಾಗಿದ್ದು ಅನ್ನ ಸಂತರ್ಪಣೆಯ ಕಾರ್ಯಗಳು ಫೆ.24 ರಿಂದಲೇ ಆರಂಭವಾಗಲಿದೆ ಎಂದರು. ಶತಚಂಡಿಕಾಯಾಗ ಹಾಗೂ ಧರ್ಮನೇಮೋತ್ಸವದ ದಿನ ಒಡ್ಡೂರು ಧರ್ಮ ಚಾವಡಿಗೆ ಆಗಮಿಸುವ ಭಕ್ತಾಧಿಗಳಿಗೆ ಅನುಕೂಲವಾಗುವ ದೃಷ್ಟಿಯಿಂದ ಬಿ.ಸಿ.ರೋಡು ರಕ್ತೇಶ್ವರಿ ದೇವಸ್ಥಾನ ಹಾಗೂ ಪೊಳಲಿ‌ ಸಮೀಪದ ಕೈಕಂಬದಿಂದ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.ಸಾರ್ವಜನಿಕರು‌ ಇದರ ಸದುಪಯೋಗ ಪಡೆದುಕೊಳ್ಳುವಂತೆ ಅವರು ಮನವಿ ಮಾಡಿದರು. ಭಂಡಾರ ಮನೆಯ ನಿರ್ಮಾಣದ ಮೇಲುಸ್ತುವಾರಿ ಮುರಳೀಧರ ಶೆಟ್ಟಿ,
ಪ್ರಮುಖರಾದ ದೇವದಾಸ್ ಶೆಟ್ಟಿ, ಪ್ರಭಾಕರ ಪ್ರಭು, ಪುಷ್ಪರಾಜ ಚೌಟ, ಪುರುಷೋತ್ತಮ ಶೆಟ್ಟಿ, ಸದಾನಂದ ನಾವೂರ ಮೊದಲಾದವರು ಉಪಸ್ಥಿತರಿದ್ದರು.

More from the blog

ನರಿಕೊಂಬು: ನವಜೀವನ ವ್ಯಾಯಾಮ ಶಾಲೆ: 21ರಂದು ಹನುಮಾನ್ ಮಂದಿರ ಲೋಕಾರ್ಪಣೆ

ಬಂಟ್ವಾಳ: ಇಲ್ಲಿನ ನರಿಕೊಂಬು ಗ್ರಾಮದ ನವಜೀವನ ವ್ಯಾಯಾಮ ಶಾಲೆ ವತಿಯಿಂದ ರೂ 1 ಕೋಟಿ ವೆಚ್ಚದಲ್ಲಿ ಪುನರ್ ನಿಮರ್ಾಣಗೊಂಡ ಶ್ರೀ ಹನುಮಾನ್ ಮಂದಿರ ಲೋಕಾರ್ಪಣೆ ಮತ್ತು ಶ್ರೀ ಆಂಜನೇಯ ಬಿಂಬ ಪುನರ್ ಪ್ರತಿಷ್ಠೆ...

ಹಿಂದೂ ಸಂಘಟನೆ ಮುಖಂಡನಿಗೆ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಚೂರಿ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣೆಯ ಪೋಲೀಸರು ಬಂಧಿಸಿದ ಘಟನೆ ಇಂದು ನಡೆದಿದೆ. ಬಂಟ್ವಾಳ ನಿವಾಸಿ ರವಿ ಯಾನೆ ರವೀಂದ್ರ ಬಂಧಿತ ಆರೋಪಿಯಾಗಿದ್ದಾನೆ. ಎ.14 ರಂದು ಆದಿತ್ಯವಾರ...

ಬಂಟ್ವಾಳ: ಕರ್ಪೆ ಗ್ರಾಮದ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವಂತೆ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಕಾರ್ಯಕ್ರಮದ ಮೂಲಕ ಬಂಟ್ವಾಳದ...

ವೈದ್ಯರ ಎಡವಟ್ಟು : ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ

ಮಂಗಳೂರಿನ ಹೆಸರಾಂತ ಮನೋರೋಗ ತಜ್ಞರೊಬ್ಬರು ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ ಹೊಡೆದು ಆವಾಂತರ ಸೃಷ್ಟಿಸಿದ ಘಟನೆ ನಗರ ಹೊರ ವಲಯದ ಪರಂಗಿಪೇಟೆ ಬಳಿಯ ಅರ್ಕುಳ ಎಂಬಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಕುಡಿದ...