Saturday, April 6, 2024

ಒಡಿಯೂರಿನಲ್ಲಿ 2ದಿನಗಳ ತುಳು ಕಾವ್ಯ ರಚನಾ ಕಮ್ಮಟ

ಒಡಿಯೂರು: ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಒಡಿಯೂರ್‍ದ ತುಳುಕೂಟದ ಸಹಕಾರದೊಂದಿಗೆ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರ ಮಾರ್ಗದರ್ಶನದಲ್ಲಿ ಎಪ್ರಿಲ್ 11 ಮತ್ತು 12ರ ಶನಿವಾರ ಮತ್ತು ಆದಿತ್ಯವಾರ ಎರಡು ದಿನಗಳ ತುಳು ಕಾವ್ಯ ರಚನಾ ಕಮ್ಮಟ(ತುಳು ಕಬಿತೆ ಕಟ್ಟುನ ಕಜ್ಜಕೊಟ್ಯ)ವನ್ನು ಏರ್ಪಡಿಸಲಾಗಿದೆ.

ಹಿರಿಯ ಕವಿ-ಸಾಹಿತಿ ಡಾ. ವಸಂತಕುಮಾರ ಪೆರ್ಲ ಅವರು ಶಿಬಿರದ ನಿರ್ದೇಶಕರಾಗಿದ್ದು, ತಜ್ಞರು ವಿಷಯ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿರುವರು.
ಕಾವ್ಯ ರಚನೆಯಲ್ಲಿ ಆಸಕ್ತರಾಗಿರುವ ಯುವಕ-ಯುವತಿಯರು ತಮ್ಮ ಪೂರ್ಣ ಅಂಚೆ ವಿಳಾಸ, ದೂರವಾಣಿ ಸಂಖ್ಯೆ, ಕೃತಿ ರಚನೆಯ ವಿವರಗಳನ್ನೊಳಗೊಂಡ ಅರ್ಜಿಯನ್ನು ಮಾರ್ಚ್ 31ರೊಳಗೆ ನಿರ್ದೇಶಕರು, ತುಳು ಕಾವ್ಯ ರಚನಾ ಕಮ್ಮಟ, ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್, ಒಡಿಯೂರು- 574243, ಬಂಟ್ವಾಳ ತಾಲೂಕು, ದ.ಕ. ಇಲ್ಲಿಗೆ ಬರೆದು ನೋಂದಾಯಿಸಲು ಕೋರಿದೆ ಅಥವಾ ಇಮೇಲ್:[email protected]ಗೆ ಕಳುಹಿಸಿಕೊಡಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 08255- 266282/266211, ಮೊಬೈಲ್:9448177811ನ್ನು ಸಂಪರ್ಕಿಸಬಹುದು. ಸೀಮಿತ ಪ್ರವೇಶಾವಕಾಶ ಇರುವುದರಿಂದ ಅರ್ಜಿಗಳನ್ನು ಆದಷ್ಟು ಶೀಘ್ರ ಕಳುಹಿಸಿಕೊಡುವಂತೆ ಸೂಚಿಸಿದೆ. ಆಯ್ಕೆಯಾದವರಿಗೆ ಒಡಿಯೂರಿಗೆ ಬಂದು ಹೋಗುವ ಸಾಮಾನ್ಯ ಪ್ರಯಾಣ ವೆಚ್ಚ ನೀಡಲಾಗುವುದು. ಕಮ್ಮಟದಲ್ಲಿ ರಚನೆಯಾದ ಕವನಗಳು ಅನಂತರ ಕೃತಿರೂಪದಲ್ಲಿ ಪ್ರಕಟವಾಗಲಿದೆ.

More from the blog

ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ : ಕಡಬ, ಅಜೆಕಾರಿನಲ್ಲಿ ದಾಖಲೆಯ ಉಷ್ಣಾಂಶ

ಮಂಗಳೂರು: ಮುಂದಿನ ಎರಡು ದಿನಗಳ ಕಾಲ ಬಿಸಿಲಿನ ಶಾಕ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಕರಾವಳಿ ಭಾಗದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು, ಎ. 4ರಿಂದ 5ರ...

ಕಡಬ: ಚೇರು ಪ್ರದೇಶದ ಮನೆಗೆ ಶಂಕಿತರ ಭೇಟಿ : ಊಟ ಮಾಡಿ, ಸಾಮಗ್ರಿ ಪಡೆದು ತೆರಳಿದ ಶಂಕಿತರು

ಸುಬ್ರಹ್ಮಣ್ಯ: ಕಡಬ ಪೊಲೀಸ್‌ ಠಾಣಾ ವ್ಯಾಪ್ತಿಯ ಮನೆಯೊಂದಕ್ಕೆ ಗುರುವಾರ ರಾತ್ರಿ ವೇಳೆ ಶಂಕಿತರ ತಂಡ ಆಗಮಿಸಿ ಊಟ, ಮಾಡಿ ದಿನಸಿ ಸಾಮಾಗ್ರಿಗಳನ್ನು ಪಡೆದು ತೆರಳಿರುವ ವಿಷಯ ಶುಕ್ರವಾರ ಸಂಜೆ ವೇಳೆಗೆ ಬೆಳಕಿಗೆ ಬಂದಿದೆ. ತಾಲೂಕಿನ...

ಮತದಾನ ಜಾಗೃತಿ ಅಂಗವಾಗಿ ಸೆಲ್ಫಿ, ಸಹಿ ಅಭಿಯಾನಕ್ಕೆ ಚಾಲನೆ

ಮತದಾರರರಲ್ಲಿ ಮತದಾನ ಜಾಗೃತಿ ಮೂಡಿಸುವ ಸಲುವಾಗಿ ಬಂಟ್ವಾಳ ತಾಲೂಕು ಪಂಚಾಯತ್, ತಾಲೂಕು ಆಡಳಿತ ಮತ್ತು ತಾಲೂಕು ಸ್ವೀಪ್ ಸಮಿತಿ ವತಿಯಿಂದ ಎ‌.5ರಂದು ಸೆಲ್ಫಿ, ಸಹಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ...

ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪ್ರಮುಖರ ಮನೆಗೆ ಲೋಕಸಭಾ ಅಭ್ಯರ್ಥಿ ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ: ರಾಷ್ಟ್ರದ ಹಿತಾಸಕ್ತಿಯ ದೃಷ್ಟಿಯಿಂದ, ವಿಕಸಿತ ಭಾರತದ ಸಂಕಲ್ಪಕ್ಕೆ ಮತ್ತೊಮ್ಮೆ ಮೋದಿಯವರು ಪ್ರಧಾನಿಯಾಗಬೇಕು, ಈ ನಿಟ್ಟಿನಲ್ಲಿ ರಾಜ್ಯದ ಪ್ರತಿಯೊಂದು ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಗೆಲುವು ಸಾಧಿಸಬೇಕಾಗಿದೆ ಎಂದು ಮಂಗಳೂರು ಲೋಕಸಭಾ ಅಭ್ಯರ್ಥಿ ಬ್ರಿಜೇಶ್...