ಬಂಟ್ವಾಳ: ದ್ವಿತೀಯ ಪಿಯುಸಿ ವಿದ್ಯಾರ್ಥಿ ಜೀವನದ ಮಹತ್ವದ ಘಟ್ಟ. ಇದಕ್ಕೆ ಪೂರ್ವ ತಯಾರಿಯಾಗಿ ವಿಶೇಷ ವಿಜ್ಞಾನ ತರಗತಿಗಳು ಸಹಾಯಕ ಹಾಗೂ ಈ ತರಗತಿಗಳು ಕಲಿಕೆಗೆ ಪೂರಕವಾಗಿ, ವಿದ್ಯಾರ್ಥಿಗಳ ಬೌದ್ಧಿಕ ವಿಕಸನಕ್ಕೆ ದಾರಿ ಮಾಡಿಕೊಡುತ್ತದೆ ಎಂದು ಶ್ರೀರಾಮ ವಿದ್ಯಾಕೇಂದ್ರದ ಕೋಶಾಧಿಕಾರಿಗಳಾದ ಸತೀಶ್ ಭಟ್ ಶಿವಗಿರಿ ಹೇಳಿದರು.
ಕಲ್ಲಡ್ಕ ಶ್ರೀರಾಮ ಪದವಿ ಪೂರ್ವ ವಿದ್ಯಾಲಯದ 2020-21ನೇ ಸಾಲಿನ ವಿಜ್ಞಾನ ವಿಭಾಗದ ವಿಶೇಷ ತರಗತಿಯ ಕುರಿತು ನಡೆದ ಪೋಷಕರ ಸಭೆಯಲ್ಲಿ ಅವರು ಮಾತನಾಡಿದರು.
ಶ್ರೀರಾಮ ಪದವಿ ಪೂರ್ವ ಕಾಲೇಜಿನ ಗಣಿತಶಾಸ್ತ್ರ ಉಪನ್ಯಾಸಕಿಯಾದ ಜಯಲಕ್ಷ್ಮೀ ಕೆ. ಪೋಷಕರಿಗೆ ವಿಶೇಷ ತರಗತಿಯ ಕುರಿತು ಮಾಹಿತಿಯನ್ನು ನೀಡಿದರು. ಶ್ರೀರಾಮ ವಿದ್ಯಾಕೇಂದ್ರದ ಸಹಸಂಚಾಲಕರಾದ ರಮೇಶ್. ಎನ್ ಅಟಲ್ ಟಿಂಕರಿಂಗ್ ಲ್ಯಾಬ್ ಬಗ್ಗೆ ವಿವರಿಸಿದರು. ಶ್ರೀರಾಮ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಕರುಣಾಕರ್ ಉಪಸ್ಥಿತರಿದ್ದರು. ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕಿಯಾದ ತೇಜಸ್ವಿನಿ ಕಾರ್ಯಕ್ರಮವನ್ನು ನಡೆಸಿಕೊಟ್ಟರು.