ಕಲ್ಲಡ್ಕ: ಶ್ರೀ ರಾಮ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಫೆ.17 ರಂದು ಸೋಮವಾರ ರಾಷ್ಟ್ರಮಟ್ಟದ ವಿಚಾರ ಸಂಕಿರಣ- ಸಶಕ್ತ ಭಾರತಕ್ಕೆ ಸದೃಢ ಹೆಜ್ಜೆಗಳು ವೇದವ್ಯಾಸ ಸಭಾಭವನದಲ್ಲಿ ಜರಗಲಿದೆ.

ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಪ್ರಥಮ ವಿಚಾರಗೋಷ್ಟಿಯಲ್ಲಿ ಬೆಂಗಳೂರಿನ ಸಾಮಾಜಿಕ ಕಾರ್ಯಕರ್ತೆ, ನ್ಯಾಯವಾದಿ, ಕಲಾವಿದೆ ಮಾಳವಿಕಾ ಅವಿನಾಶ್ ಅವರ ಪೌರತ್ವ ತಿದ್ದುಪಡಿ ಕಾಯ್ದೆ: ಘಟನೆಗಳ ಸುತ್ತಮುತ್ತ ಎಂಬ ವಿಷಯಗಳ ಬಗ್ಗೆ ವಿಚಾರ ಸಂಕಿರಣ ನಡೆಸಲಿದ್ದಾರೆ.
ಎರಡನೇ ವಿಚಾರಗೋಷ್ಟಿಯಲ್ಲಿ ಬೆಂಗಳೂರಿನ ಬಿ.ಜೆ.ಪಿ. ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಸಶಕ್ತ ಭಾರತ: ಆರ್ಥಿಕತೆ ಮತ್ತು ರಕ್ಷಣೆಯ ಪಾತ್ರ ಎಂಬ ವಿಷಯದ ಬಗ್ಗೆ ವಿಚಾರ ಸಂಕಿರಣ ನಡೆಸಲಿದ್ದಾರೆ.

ಮೂರನೇ ವಿಚಾರಗೋಷ್ಟಿಯಲ್ಲಿ ಬೆಂಗಳೂರಿನ ಆರೋಹಿ ರಿಸರ್ಚ್ ಫೌಂಡೇಶನ್ ನ ನಿರ್ದೇಶಕ, ವಿಮರ್ಶಕ, ಚಿಂತಕ ಮತಿಘಟ್ಟ ಚೈತ್ರ ಅವರ ಜನಸಂಖ್ಯೆ: ಲಾಭವೇ- ಅಪಾಯವೇ ನಡೆಸಲಿದ್ದಾರೆ.
ನಾಲ್ಕನೇ ವಿಚಾರಗೋಷ್ಟಿಯಲ್ಲಿ ಮೈಸೂರಿನ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ, ಪ್ರಾಧ್ಯಾಪಕ ಬಿ.ವಿ.ವಸಂತ್ ಕುಮಾರ್‍ ಅವರ ಬೌದ್ಧಿಕ ದಾಸ್ಯ: ಮೇಲೇಳುತ್ತಿದೆಯೇ ಭಾರತ ಎಂಬ ವಿಷಯಗಳ ಕುರಿತು ವಿಚಾರ ಸಂಕಿರಣ ನಡೆಯಲಿದೆ.
ಈ ಕಾರ್ಯಕ್ರಮಕ್ಕೆ ಒಂದು ಸಂಸ್ಥೆಯಿಂದ ಸ್ನಾತಕ ಹಾಗೂ ಸ್ನಾತಕೋತ್ತರ ವಿಭಾಗದ ನಾಲ್ಕು ವಿದ್ಯಾರ್ಥಿಗಳು ಹಾಗೂ ಓರ್ವ ಪ್ರಾಧ್ಯಪಕರು ಭಾಗವಹಿಸಬಹುದು. ಭಾಗವಹಿಸುವ ಎಲ್ಲರಿಗೂ ಒಒಡಿ ಹಾಗೂ ಪ್ರಮಾಣಪತ್ರಗಳನ್ನು ನೀಡಲಾಗುವುದು. ಮಂಗಳೂರು ವಿ.ವಿ. ಹೊರತುಪಡಿಸಿ ಇತರ ವಿಶ್ವವಿದ್ಯಾನಿಲಯ ಹಾಗೂ ಬೇರೆ ರಾಜ್ಯದ ಪ್ರತಿನಿಧಿಗಳು ಮುಂಚಿತವಾಗಿ ಸೂಚಿಸಿದ್ದಲ್ಲಿ ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ಪ್ರತಿ ಅವಧಿಯ ಕೊನೆಯಲ್ಲಿ ಪ್ರಶ್ನೋತ್ತರಕ್ಕೆ ಅವಕಾಶವಿದೆ. ಈ ಕಾರ್ಯಕ್ರಮಕ್ಕೆ ಭಾಗವಹಿಸುವ ಬಗ್ಗೆ 9980540907 ಹಾಗೂ ಹೆಚ್ಚಿನ ಮಾಹಿತಿಗಾಗಿ 9964280734 ಅನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here