ಬಂಟ್ವಾಳ: ಸಿದ್ದಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸೆ ಕೋಶ ಆಶ್ರಯದಲ್ಲಿ ಎಲ್ಲಾ ಉಪನ್ಯಾಸಕರು ಹಾಗೂ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಫೆ. 14 ರಂದು ಒಂದು ದಿನದ ಸಂಶೋಧನೆ ಮತ್ತು ಪ್ರಕಾಶನ ಕುರಿತು ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು.
ಸಿಬ್ಬಂದಿ ಅಭಿವೃದ್ಧಿ ಕಾರ್ಯಗಾರವನ್ನು ಸಂಗಬೆಟ್ಟು ಕ್ಷೇತ್ರದ ತಾಲೂಕು ಪಂಚಾಯತ್ ಸದಸ್ಯ ಪ್ರಭಾಕರ ಪ್ರಭು ಅವರು ಉದ್ಘಾಟಿಸಿ, ಮಾತನಾಡಿ, ಎಲ್ಲ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು. ಎಲ್ಲಾ ಬೋಧಕ ವರ್ಗದವರು ಕೇವಲ ಪಾಠ ಪ್ರವಚನ ಭೋಧನೆ ಮಾತ್ರವಲ್ಲದೆ ತಮ್ಮನ್ನು ಸಂಶೋಧನೆ ಹಾಗೂ ಉತ್ತಮ ಲೇಖನಗಳ ಪ್ರಕಾಶನಕ್ಕೆ ಆದ್ಯತೆ ನೀಡಬೇಕು ಎಂದರು.
ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಲೋಕೇಶ್, ಪ್ರಥಮ ತಾಂತ್ರಿಕ ಅವಧಿಯಲ್ಲಿ ಸಂಶೋಧನೆಯಲ್ಲಿ ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ಕುರಿತು ತಿಳಿಸಿದರು.


ಎರಡನೇ ತಾಂತ್ರಿಕ ಅವಧಿಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ಅಧ್ಯಯನ ಹಾಗೂ ಸಂಶೋಧನಾ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪ್ರೋ. ವಾಜಿದ ಬಾನು, ಸಮಾಜ ವಿಜ್ಞಾನಗಳಲ್ಲಿ ಸಂಶೋಧನೆ ವಿಧಾನ ಹಾಗೂ ಮೂರನೇ ತಾಂತ್ರಿಕ ಅವಧಿಯಲ್ಲಿ ಪ್ರಕಾಶನದ ನೈತಿಕತೆಯ ಕುರಿತು ವಿವರಿಸಿದರು.
ಕಾರ್ಯಕ್ರಮದ ಸಮಾರೋಪ ಭಾಷಣಕಾರರಾಗಿ ಆಗಮಿಸಿದ್ದ ಮೂಡಬಿದರೆಯ ಮಹಾವೀರ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಸಹಪ್ರಾಧ್ಯಾಪಕ ಪ್ರೊ. ರಾಧಾಕೃಷ್ಣ ಅವರು ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಸ್ಥಳೀಯ ವಿಚಾರಗಳು ಹಾಗೂ ಸಮಸ್ಯೆಗಳನ್ನು ಬಿಂಬಿಸುವ ಸಂಶೋಧನೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮಾರ್ಗದರ್ಶನ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಸೌಮ್ಯ ಹೆಚ್.ಕೆ. ಅವರು ಸಭೆಯನ್ನು ಕುರಿತು ವಿದ್ಯಾರ್ಜನೆ ಸಂಪೂರ್ಣವಾಗಬೇಕಾದರೆ ಸಂಶೋಧನೆ ಹಾಗೂ ಪ್ರಕಾಶನ ಅಗತ್ಯವಾಗಿದೆ. ಸಂಶೋಧನೆಯಿಂದ ಸಮಾಜದ ಹಲವು ಸಮಸ್ಯೆಗಳನ್ನು ಬಗೆಹರಿಸಬಹುದು ಎಂದರು.
ಈ ಕಾರ್ಯಾಗಾರವನ್ನು ಗ್ರಂಥಪಾಲಕರಾದ ಡಾ. ಶ್ರೀನಿವಾಸ್ ಹಾಗೂ ಐಕ್ಯೂಎಸಿ ಸಂಚಾಲಕ ವಿನಯ್ ಎಂ. ಅವರು ಆಯೋಜಿಸಿದ್ದರು. ಕಾರ್ಯಕ್ರಮದ ಕುರಿತು ವಾಣಿಜ್ಯ ಶಾಸ್ತ್ರದ ಸಹಾಯಕ ಪ್ರಾಧ್ಯಾಪಕ ದೇವಿಪ್ರಸಾದ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ನಸೀಮಾ ಬೇಗಂ ಸ್ವಾಗತಿಸಿ, ದ್ವಿತೀಯ ಬಿಕಾಂ ವಿದ್ಯಾರ್ಥಿನಿ ಚೈತ್ರ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here