ಬಂಟ್ವಾಳ: ಸಿದ್ಧಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಇಂದು ಉದ್ಘಾಟನೆಗೊಂಡಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಂಗಳೂರು ಎಸ್‌ಡಿಎಂ ಕಾಲೇಜಿನ ನಿವೃತ್ತ ದೈಹಿಕ ಶಿಕ್ಷಣ ನಿರ್ದೆಶಕ ಭರತ್ ಕುಮಾರ್ ಜೈನ್, ವಿದ್ಯಾರ್ಥಿಗಳು ಕ್ರೀಡೆಗಳ ಮೂಲಕ ದೈಹಿಕ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಬೇಕು ಇದರಿಂದ ಮಾನಸಿಕ ಆರೋಗ್ಯ ಹಾಗೂ ಬೌದ್ಧಿಕ ಆರೋಗ್ಯವನ್ನು ಕೂಡ ಕಾಪಾಡಿಕೊಳ್ಳಬಹುದು. ವಿದ್ಯಾರ್ಥಿಗಳು ಕ್ರೀಡೆಗಳ ಮೂಲಕ ರಾಷ್ಟ್ರಮಟ್ಟಗಳಲ್ಲಿ ಗುರುತಿಸಲ್ಪಡುವಂತಾಗಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಸೌಮ್ಯ ಹೆಚ್.ಕೆ. ಮಾತನಾಡಿ, ಸೋಲು ಗೆಲುವುಗಳು ಸಹಜ. ಸೋಲನ್ನು ಸಹಜವಾಗಿ ಸ್ವೀಕರಿಸಿ, ಕ್ರೀಡಾಸ್ಪೂರ್ತಿಯಲ್ಲಿ ಭಾಗವಹಿಸಿ ಕ್ರೀಡೋತ್ಸವವನ್ನು ಯಶಸ್ವಿಯಾಗಿಸಲು ಹೇಳಿದರು.
ನಿವೃತ್ತ ಶಿಕ್ಷಕ ನಾರಾಯಣ ನಾಯಕ್‌ರವರು ಧ್ವಜಾರೋಹಣ ನೆರವೇರಿಸಿದರು. ಕ್ರೀಡಾ ಸಂಚಾಲಕ, ಕಾಲೇಜಿನ ಗ್ರಂಥಪಾಲಕ ಡಾ. ಶ್ರೀನಿವಾಸ, ಕ್ರೀಡಾಪಟುಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಶ್ರೀಮತಿ ನಸೀಮಾ ಬೇಗಂ ಎಸ್, ಶ್ರೀ ದೇವಿಪ್ರಸಾದ್, ಶ್ರೀ ಹನುಮಂತಯ್ಯ ಜಿ.ಹೆಚ್ ಹಾಗೂ ಶ್ರೀ ವಿನಯ್ ಎಂ.ಎಸ್ ಹಾಗೂ ಅತಿಥಿ ಉಪನ್ಯಾಸಕರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಪಥಸಂಚಲನದ ಮೂಲಕ ಅತಿಥಿಗಳಿಗೆ ಗೌರವ ಸೂಚಿಸಿದರು.
ಸೈಂಟ್ ಪ್ಯಾಟ್ರಿಕ್ ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಕ ಸೃಜನ್ ಕ್ರೀಡೆಗಳನ್ನು ನಡೆಸಿಕೊಟ್ಟರು. ರಕ್ಷಾ ಪ್ರಾರ್ಥಿಸಿ, ಸ್ವಾತಿ ಸ್ವಾಗತಿಸಿ, ಕ್ರೀಡಾ ಕಾರ್ಯದರ್ಶಿ ಅಭಿಜಿತ್ ವಂದಿಸಿದರು. ಪ್ರಜ್ವಲ್ ಕಾರ್ಯಕ್ರಮ ನಿರೂಪಿಸಿದರು.