ಬಂಟ್ವಾಳ: ಶ್ರೀರಾಮ ವಿದ್ಯಾಕೇಂದ್ರದಲ್ಲಿ ಫೆ. 23 ರಂದು ಭಾನುವಾರ ಬೆಳಗ್ಗೆ 9 ರಿಂದ ಮಧ್ಯಾಹ್ನ 1ರ ವರೆಗೆ ಹಿರಿಯ ವಿದ್ಯಾರ್ಥಿಗಳ ಸ್ನೇಹ ಸಂಗಮ ಕಾರ್ಯಕ್ರಮ ನಡೆಯಲಿದೆ. ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಚಂದನ ವಾಹಿನಿಯ ನಿರೂಪಕ (ಥಟ್ ಅಂತ ಹೇಳಿ) ಕಾರ್ಯಕ್ರಮದ ಪ್ರಸಿದ್ಧಿ ಪಡೆದಿರುವ ಡಾ. ನಾ. ಸೋಮೇಶ್ವರ ಆಗಮಿಸಲಿದ್ದಾರೆ. ವೇದಿಕೆಯಲ್ಲಿ ಶ್ರೀರಾಮ ವಿದ್ಯಾಕೇಂದ್ರದ ಅಧ್ಯಕ್ಷ ನಾರಾಯಣ ಸೋಮಯಾಜಿ, ಸಂಚಾಲಕ ವಸಂತ ಮಾಧವ ಉಪಸ್ಥಿತರಿರುವರು ಎಂದು ಶ್ರೀರಾಮ ವಿದ್ಯಾಕೇಂದ್ರದ ಸಂಚಾಲಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.