Wednesday, April 10, 2024

ಕಂಬಳ ಕೋಣಗಳ ಓಟಗಾರ ಶ್ರೀನಿವಾಸ ಗೌಡರಿಗೆ ಹೆಗ್ಗಡೆಯವರಿಂದ ಸನ್ಮಾನ

ಉಜಿರೆ: ಸೋಲು-ಗೆಲುವಿನ ಬಗ್ಗೆ ಚಿಂತಿಸದೆ ಬದ್ಧತೆಯಿಂದ ಪ್ರಾಮಾಣಿಕ ಪ್ರಯತ್ನ ಮಾಡಿ ಇನ್ನೂ ಹೆಚ್ಚಿನ ಸಾಧನೆ ಮಾಡಬೇಕು. ಕಂಬಳ ಕ್ರೀಡೆಗೂ ಒಳ್ಳೆಯ ಕಾಲ ಹಾಗೂ ಒಂದು ಯೋಗ ಬಂದಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆಯವರು ಹೇಳಿದರು.
ಅವರು ಸೋಮವಾರ ಧರ್ಮಸ್ಥಳದಲ್ಲಿ ತಮ್ಮ ನಿವಾಸದಲ್ಲಿ ಕಂಬಳ ಕೋಣಗಳ ಓಟದಲ್ಲಿ ದಾಖಲೆ ನಿರ್ಮಿಸಿದ ಮೂಡಬಿದ್ರೆ ಬಳಿ ಅಶ್ವತ್ಥಪುರ ನಿವಾಸಿ ಶ್ರೀನಿವಾಸ ಗೌಡಅವರನ್ನು ಸನ್ಮಾನಿಸಿ ಅಭಿನಂದಿಸಿದರು.
ಗೆಲುವು ಬಂದಾಗ ಹಿಗ್ಗದೆ, ಸೋಲು ಬಂದಾಗ ಕುಗ್ಗದೆ ಸಮತೋಲನದಲ್ಲಿರಬೇಕು. ಸ್ಥಿಮಿತ ಕಳೆದುಕೊಳ್ಳಬಾರದು. ಸಭೆ-ಸಮಾರಂಭಗಳಿಗೆ ಹೋಗುವಾಗ ಪ್ಯಾಂಟು ಹಾಕಬಾರದು. ಬಿಳಿ ಧೋತಿ ಉಡಬೇಕು ಎಂದು ಹೊಸ ವೇಸ್ಟಿಯನ್ನು ಉಡುಗೊರೆಯಾಗಿ ನೀಡಿದರು.
ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಕಂಬಳ ಅಕಾಡೆಮಿ ಸಂಚಾಲಕ ಕೆ.ಗುಣಪಾಲ ಕಡಂಬ, ಎಸ್.ಡಿ. ಸಂಪತ್ ಸಾಮ್ಯಾಜ್ಯ ಶಿರ್ತಾಡಿ, ಕೋಣಗಳ ಮಾಲಕ ಸತೀಶ್ಚಂದ್ರ ಸಾಲಿಯಾನ್‌ ಇರುವೈಲ್, ಕಂಬಳ ಅಕಾಡೆಮಿ ನಿರ್ದೇಶಕರುಗಳಾದ ಜ್ವಾಲಾ ಪ್ರಸಾದ್‌ ಈದು, ಸುಭಾಶ್ಚಂದ್ರ ಚೌಟ ಮೂಡಬಿದ್ರೆ, ಮಂಗಳೂರು ಎ.ಪಿ.ಎಂ.ಸಿ. ಅಧ್ಯಕ್ಷ ಪ್ರವೀಣ ಕುಮಾರ್‌ ಜೈನ್, ಚಿಂತನ್‌ ಲೋಬೊ, ತರಬೇತುದಾರ ದಿನೇಶ್ ಅಳಿಯೂರು ಉಪಸ್ಥಿತರಿದ್ದರು.

More from the blog

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ಎ.14ರ ಪ್ರಧಾನಿ ಮೋದಿ ಸಮಾವೇಶ ರದ್ದು : ರೋಡ್ ಶೋದಲ್ಲಿ ಮಾತ್ರ ಭಾಗಿ

ಮಂಗಳೂರು: ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶಕ್ಕೆ ಆಯೋಜನೆ ಮಾಡಲಾಗಿತ್ತು. ಆದರೆ ಇದೀಗ ಕೊನೆ ಕ್ಷಣದಲ್ಲಿ ಈ ಸಮಾವೇಶ ರದ್ದುಪಡಿಸಲಾಗಿದೆ. ಏಪ್ರಿಲ್ 14ರಂದು ಮಂಗಳೂರಿನಲ್ಲಿ...

ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ….?​ ಇಲ್ಲಿದೆ ಮಾಹಿತಿ

ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....