ಬಂಟ್ವಾಳ: ವೀರಕಂಬ ಮಜಿ ದ.ಕ.ಜಿ.ಪಂ.ಹಿ.ಪ್ರಾ. ಶಾಲೆಯಲ್ಲಿ ಮಾಣಿ ಕ್ಷೇತ್ರದ ಜಿ.ಪಂ. ಸದಸ್ಯೆ ಮಂಜುಳಾ ಮಾಧವ ಮಾವೆ ಅವರ ಶಿಫಾರಸಿನ ಮೇರೆಗೆ ದ.ಕ. ಜಿಲ್ಲಾ ಪಂಚಾಯತಿನ ಯುವಸಬಲೀಕರಣ ಹಾಗೂ ಕ್ರೀಡಾ ಇಲಾಖೆಯಿಂದ ಸುಮಾರು 5000 ಮೌಲ್ಯದ ಕ್ರೀಡಾ ಸಾಮಗ್ರಿಗಳನ್ನು ನೀಡಿದ್ದು, ಇದನ್ನು ಶಾಲಾ ಮಕ್ಕಳಿಗೆ ಜಿ.ಪಂ. ಸದಸ್ಯೆ ಮಂಜುಳಾ ಮಾಧವ ಮಾವೆ ವಿತರಿಸಿ, ಮಾತನಾಡುತ್ತಾ ಮಕ್ಕಳು ಇದರ ಸದುಪಯೋಗ ಪಡೆದುಕೊಳ್ಳಿ ಹಾಗೂ ಶಾಲೆಗೆ ತುರ್ತು ಅಗತ್ಯವಿರುವ ನೀರಿನ ವ್ಯವಸ್ಥೆಗಾಗಿ ಶಾಲಾ ಆವರಣದಲ್ಲಿ ಸುಮಾರು 20000 ಲೀಟರ್ ಸಾಮರ್ಥ್ಯದ ಸಂಪನ್ನು ಶೀಘ್ರವೇ ಮಾಡಿ ಶಾಲೆಯ ನೀರಿನ ಸಮಸ್ಯೆಯನ್ನು ಬಗೆಹರಿಸುವ ಭರವಸೆ ನೀಡಿದರು ಹಾಗೂ ಶಾಲೆಗೆ ಬೇಕಾದ ಪೀಠೋಪಕರಣಗಳ ವ್ಯವಸ್ಥೆ ಮಾಡುವುದಾಗಿ ಹೇಳಿದರು.
ವೇದಿಕೆಯಲ್ಲಿ ಗ್ರಾ.ಪಂ. ಸದಸ್ಯ ರಾಮಚಂದ್ರ ಪ್ರಭು ಉಪಸ್ಥಿತರಿದ್ದರು. ಶಾಲಾ ಮುಖ್ಯಶಿಕ್ಷಕ ನಾರಾಯಣ ಪೂಜಾರಿ ಸ್ವಾಗತಿಸಿ, ಶಿಕ್ಷಕಿ ಸಂಗೀತ ಶರ್ಮ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಶಾಲಾ ಶಿಕ್ಷಕಿಯರು ಸಹಕರಿಸಿದರು.