ಬಂಟ್ವಾಳ: ಕಲ್ಬುರ್ಗಿ ಜಿಲ್ಲಾ ಕಲ್ಬುರ್ಗಿ ದಕ್ಷಿಣ ವಲಯದ ಶಿಕ್ಷಣ ಸಂಯೋಜಕರು, ಕ್ಷೇತ್ರ ಸಂಪನ್ಮೂಲ ಹಾಗೂ ಸಮೂಹ ಸಂಪನ್ಮೂಲ ವ್ಯಕ್ತಿಗಳು, ಶಾಲಾ ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕರ ತಂಡ ಅಜೀಂ ಪ್ರೇಮ್ ಜೀ ಪೌಂಡೇಶನ್ ಸಹಯೋಗದಲ್ಲಿ ಶೈಕ್ಷಣಿಕ ಕ್ಷೇತ್ರ ಭೇಟಿ ಕಾರ್ಯಕ್ರಮದಲ್ಲಿ ಬಂಟ್ವಾಳ ತಾಲೂಕಿನ ಮಜಿ ವೀರಕಂಬದ ದ.ಕ. ಜಿ.ಪಂ.ಹಿ.ಪ್ರಾ. ಶಾಲೆಗೆ ಭೇಟಿ ನೀಡಿದರು.
ಮುಖ್ಯ ಶಿಕ್ಷಕ ನಾರಾಯಣ ಪೂಜಾರಿ ಶಾಲಾ ಶೈಕ್ಷಣಿಕ ಹಾಗೂ ಭೌತಿಕ ಮಾಹಿತಿ ನೀಡಿದರು. ಶಿಕ್ಷಕಿ ಸಂಗೀತ ಶರ್ಮ ಮಕ್ಕಳ ಕೃಷಿ ಚಟುವಟಿಕೆ ಹಾಗೂ ಪರಿಸರ ಜಾಗೃತಿಯ ಬಗ್ಗೆ ಮಾಹಿತಿಯನ್ನು ನೀಡಿದರು.