ವಿಟ್ಲ: ವಿಟ್ಲ ಶ್ರೀ ಭಗವತೀ ದೇವಸ್ಥಾನದ ಬಳಿ ನಿರ್ಮಿಸಲಾದ ಕಾಲು ಸಂಕದ ಉದ್ಘಾಟನೆಯನ್ನು ತಾಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಶೇಖರ ಕರ್ಕೇರ ನೆರವೇರಿಸಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಜಣ್ಣ, ಸಹಾಯಕ ನಿರ್ದೇಶಕ ಪ್ರಶಾಂತ್, ಕೊಳ್ನಾಡು ತಾಲೂಕು ಪಂಚಾಯಿತಿ ಸದಸ್ಯ ನಾರಾಯಣ ಶೆಟ್ಟಿ, ವಲಯ ಮೇಲ್ವಿಚಾರಕ ಕುಶಾಲಪ್ಪ ಗೌಡ, ಮೋನಪ್ಪ ಗುರುಸ್ವಾಮಿ, ಭಗವತೀ ದೇವಸ್ಥಾನದ ಕೇಶವ ವಿಟ್ಲ ಮತ್ತು ಮೋಹನ, ಯಕ್ಷಭಾರತ ಪ್ರತಿಷ್ಠಾನದ ಅಧ್ಯಕ್ಷ ಸಂಜೀವ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.