ಬಂಟ್ವಾಳ: ಅಕ್ರಮವಾಗಿ ಲಾರಿಯಲ್ಲಿ ಗಾಂಜಾ ಮಾರಾಟಕ್ಕಾಗಿ ಸಾಗಾಟ ಮಾಡಲು ಹೊಂಚು ಹಾಕುತ್ತಿದ್ದ ಆರೋಪಿ ಸಹಿತ ಲಾರಿಯನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ವಿಟ್ಲ ಪೋಲೀಸ್ ಠಾಣೆಯ ಲ್ಲಿ ನಡೆದಿದೆ.
ಅಳಿಕೆ ಗ್ರಾಮದ ಕಾಂತಡ್ಕ ನಿವಾಸಿ ಹಾರೀಸ್ ಎಂಬ ಆರೋಪಿಯನ್ನು ಪೋಲೀಸರು ಬಂಧಿಸಿದ್ದಾರೆ.
ಬಂಧಿತನಿಂದ 20.000 ಮೌಲ್ಯದ 1.465 ಕೆ.ಜಿ.ಗಾಂಜಾ, 6 ಲಕ್ಷ ಮೌಲ್ಯದ ಲಾರಿ ಹಾಗೂ 2000 ಸಾವಿರ ರೂ ಮೌಲ್ಯದ ಮೊಬೈಲ್ ಪೋನ್ ವಶಕ್ಕೆ ಪಡೆದುಕೊಂಡಿದ್ದಾರೆ. ಅಳಿಕೆ ಗ್ರಾಮದ ಕಾಂತಡ್ಕ ನಿವಾಸಿ ಹಸೈನಾರ್ ಅವರ ಮನೆಯ ಅಂಗಳದಲ್ಲಿ ನಿಲ್ಲಿಸಲಾಗಿದ್ದ ಲಾರಿಯ ಕ್ಯಾಬಿನ್ ನ ಒಳಗಡೆ ಸೀಟಿನ ಅಡಿಯಲ್ಲಿ ಕೈ ಚೀಲದಲ್ಲಿ ಗಾಂಜಾ ಪತ್ತೆಯಾಗಿದೆ.
ಖಚಿತ ಮಾಹಿತಿ ಮೇರೆಗೆ ಪೋಲೀಸರು ಸ್ಥಳಕ್ಕೆ ದಾಳಿ ನಡೆಸಿದಾಗ, ಲಾರಿಯ ಸೀಟಿನಲ್ಲಿ ಸಾಗಾಟಕ್ಕೆ ತೆರಳಲು ಸಿದ್ಧನಾಗಿದ್ದ ಚಾಲಕ ಆರೋಪಿ ಪೋಲೀಸರನ್ನು ನೋಡಿ ಓಡಲಾರಂಭಿಸಿದ. ಈತನ ಬೆನ್ನಟ್ಟಿ ಹಿಡಿದು ಲಾರಿಯನ್ನು ಪರಿಶೀಲನೆ ನಡೆಸಿದಾಗ ಲಾರಿಯಲ್ಲಿ ಗಾಂಜಾ ಕಂಡುಬಂದಿದೆ. ಈತ ಕೇರಳ ಕಡೆಯಿಂದ ಕಡಿಮೆ ಬೆಲೆಗೆ ಗಾಂಜಾ ಖರೀದಿ ಮಾಡಿ ಕರ್ನಾಟಕಕ್ಕೆ ಮಾರಾಟ ಮಾಡಲು ತಂದಿರುವುದಾಗಿ ಪ್ರಾಥಮಿಕ ವಿಚಾರಣೆ ವೇಳೆ ತಿಳಿಸಿದ್ದಾನೆ. ಇನ್ನಷ್ಟು ಮಾಹಿತಿಗಳು ತನಿಖೆಯ ಬಳಿಕ ಬರಬೇಕಾಗಿದೆ.
ಬಂಟ್ವಾಳ ಡಿ.ವೈ.ಎಸ್.ಪಿ.ವೆಲಂಟೈನ್ ಡಿಸೋಜ ಅವರ ಮಾರ್ಗದರ್ಶನದಲ್ಲಿ ವೃತ್ತ ನಿರೀಕ್ಷಕ ಟಿ. ಡಿ.ನಾಗರಾಜ್ ಅವರ ನೇತ್ರತ್ವದಲ್ಲಿ ವಿಟ್ಲ ಎಸ್.ಐ.ವಿನೋದ್ ರೆಡ್ಡಿ ಯವರು ಬಂಧಿಸಿ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.