ವಿಟ್ಲ: ರಿಕ್ಷಾ ಅಪಘಾತದಲ್ಲಿ ತೀವ್ರ ಗಾಯಗೊಂಡ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಭಾನುವಾರ ನಡೆದಿದೆ.
ಉಕ್ಕುಡ ದರ್ಬೆ ನಿವಾಸಿ ಭಾರತಿ (65) ಮೃತ ಮಹಿಳೆ. ವಿಟ್ಲ ಬೊಬ್ಬೆಕೇರಿಯಲ್ಲಿ ಫೆ.16ರಂದು ಘಟನೆ ನಡೆದಿದ್ದು, ತೀವ್ರ ಗಾಯಗೊಂಡಿದ್ದರು. ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ.