


ವಿಟ್ಲ: ವಿಟ್ಲ ವ್ಯವಸಾಯ ಸೇವಾ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯರು ಜಯಭೇರಿ ಬಾರಿಸಿದ್ದಾರೆ. ಒಟ್ಟು 13 ಸ್ಥಾನಗಳ ಪೈಕಿ 2 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದೆ. ಉಳಿದ 11 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ 11 ಮಂದಿಯು ಜಯ ಗಳಿಸುವ ಮೂಲಕ ಒಟ್ಟು 13 ಸ್ಥಾನಗಳನ್ನು ತನ್ನ ಬಗಲಿಗೆ ಹಾಕಿಕೊಂಡಿದೆ.
ಕಳೆದ ಐದು ವರ್ಷಗಳಲ್ಲಿ ಉತ್ತಮ ಆಡಳಿತ ನೀಡಿದ್ದು ಮುಂದಿನ ಅವಧಿಯಲ್ಲಿಯೂ ಉತ್ತಮ ಆಡಳಿತ ನೀಡಿ ಜನರು ನಮ್ಮ ಮೇಲೆ ಇರಿಸಿದ ವಿಶ್ವಾಸಕ್ಕೆ ಚ್ಯುತಿ ಬಾರದ ರೀತಿಯಲ್ಲಿ ಉತ್ತಮ ಆಡಳಿತ ನೀಡುವ ಭರವಸೆ ನೀಡಿದ್ದಾರೆ. ಚುನಾವಣೆಯಲ್ಲಿ ದುಡಿದ ಪಕ್ಷದ ಕಾರ್ಯಕರ್ತರು, ಚುನಾವಣಾಧಿಕಾರಿಗಳಿಗೆ, ಸಿಬ್ಬಂದಿ ವರ್ಗದವರಿಗೆ, ಆರಕ್ಷಕ ಸಿಬ್ಬಂದಿಗಳಿಗೆ ವಿಟ್ಲ ನಗರ ಬಿಜೆಪಿ ಕೃತಜ್ಞತೆ ಸಲ್ಲಿಸಿದೆ.


