ಬಂಟ್ವಾಳ: ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯ, ಕಲ್ಲಡ್ಕ ಇದರ ದಶಮಾನೋತ್ಸವದ ಅಂಗವಾಗಿ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಮಹಿಳಾ ವಾಲಿಬಾಲ್ ಪಂದ್ಯಾಟವು ದಿನಾಂಕ ಫೆಬ್ರವರಿ 28 ಮತ್ತು 29, 2020 ಶುಕ್ರವಾರ ಮತ್ತು ಶನಿವಾರ ಶ್ರೀರಾಮ ಪದವಿ ಕಾಲೇಜಿನ ಆವರಣದಲ್ಲಿ ನಡೆಯಲಿದೆ.
ಪಂದ್ಯಾಟದ ಉದ್ಘಾಟನೆಯನ್ನು ಮಂಗಳೂರು ವಿಶ್ವವಿದ್ಯಾನಿಲಯ ಇದರ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ| ಕಿಶೋರ್ ಕುಮಾರ್ ಸಿ ಕೆ ಹಾಗೂ ಅಧ್ಯಕ್ಷತೆಯನ್ನು ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕ ಇದರ ಅಧ್ಯಕ್ಷ ನಾರಾಯಣ ಸೋಮಯಾಜಿ ವಹಿಸಲಿದ್ದಾರೆ. ವೇದಿಕೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಇದರ ದೈಹಿಕ ಶಿಕ್ಷಣ ವಿಭಾಗದ ಸಹ ನಿರ್ದೇಶಕ ಡಾ| ಪ್ರಸನ್ನ ಬಿ ಕೆ., ಸಂಸ್ಥೆಯ ಆಡಳಿತ ಸಮಿತಿ ಸದಸ್ಯ ಗೋಪಾಲ ಶೆಣೈ, ಪದವಿ ವಿಭಾಗದ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ನಾಗೇಶ್ ಪೂಜಾರಿ ಇರಾ ಇವರು ಉಪಸ್ಥಿತರಿರುವರು.
ಸಮಾರೋಪ ಸಮಾರಂಭವು ಫೆ.29 ರಂದು ಸಂಜೆ 3 ಗಂಟೆಗೆ ನಡೆಯಲಿದೆ. ಅಧ್ಯಕ್ಷತೆಯನ್ನು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘ ಇದರ ಅಧ್ಯಕ್ಷ ಡಾ| ಪ್ರಭಾಕರ ಭಟ್ ಕಲ್ಲಡ್ಕ ವಹಿಸಲಿದ್ದಾರೆ. ವೇದಿಕೆಯಲ್ಲಿ ಮಂಗಳೂರು ಮಾತಾ ಡೆವಲಪರ್‍ಸ್ ಇದರ ಮಾಲಕರು ಸಂತೋಷ್ ಕುಮಾರ್ ಶೆಟ್ಟಿ, ಬಂಟ್ವಾಳ ಲಯನ್ಸ್ ಕ್ಲಬ್ ಇದರ ಅಧ್ಯಕ್ಷ ಲಯನ್ ಶ್ರೀನಿವಾಸ್ ಪೂಜಾರಿ ಮೆಲ್ಕಾರ್, ಕಾಲೇಜು ಅಭಿವೃದ್ಧಿ ಸಮಿತಿ ಇದರ ಅಧ್ಯಕ್ಷ ಶಶಿಧರ ಮಾರ್ಲ, ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಕಾರ್ಯದರ್ಶಿ ಪೂರ್ಣಶ್ರೀ ಇವರು ಉಪಸ್ಥಿತರಿರುವರು.
ಪಂದ್ಯಾಟದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇದರ ಪ್ರಾಯೋಜಕತ್ವದಲ್ಲಿ ಫೆ.28 ರಂದು ರಾತ್ರಿ 7 ರಿಂದ 8.30ರವರೆಗೆ ರಾಷ್ಟ್ರದೇವೋಭವ ಖ್ಯಾತಿಯ ಮಂಗಳೂರಿನ ಸನಾತನ ನಾಟ್ಯಾಲಯ ಪ್ರಸ್ತುತ ಪಡಿಸುವ ನುಡಿ ನಾದ ನಾಟ್ಯಗಳ ಸಂಗಮ ಪುಣ್ಯಭೂಮಿ ಭಾರತ ಎಂಬ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲ ಕೃಷ್ಣಪ್ರಸಾದ ಕಾಯರ್‌ಕಟ್ಟೆ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.