ಬಂಟ್ವಾಳ: ಬಂಟ್ವಾಳ ತಾಲೂಕು ಸಾಮಾರ್ಥ್ಯ ಸೌದದಲ್ಲಿ ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಭಿವೃದ್ಧಿ ಸಂಘ(ರಿ) ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಡಿಯಲ್ಲಿ ಮಾ.1ರಂದು ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮ ಪಂಚಾಯತ್ ನೌಕರರಿಗೆ ಸ್ಪರ್ದಾತ್ಮಕ ಪರೀಕ್ಷೆಗಳ ತಯಾರಿಯ ಬಗ್ಗೆ ಮಾಹಿತಿ ಕಾರ್ಯಗಾರ ನಡೆಯಿತು.
ಮಾಹಿತಿ ಕಾರ್ಯಗಾರವನ್ನು ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಭಿವೃದ್ಧಿ ಸಂಘ(ರಿ)ದ.ಕ. ಜಿಲ್ಲಾ ಘಟಕದ ಅದ್ಯಕ್ಷ ನಾಗೇಶ್ ಎಂ. ಉದ್ಘಾಟಿಸಿ, ಪ್ರಸ್ತಾವಿಕವಾಗಿ ಮಾತನಾಡಿ, ಸ್ಪರ್ಧತ್ಮಾಕ ಪರೀಕ್ಷೆಗಳನ್ನು ಎದುರಿಸಲು ಇರುವ ನಕರಾತ್ಮಕ ಯೋಚನೆಗಳನ್ನು ಕೈಬಿಟ್ಟು ಸಕರತ್ಮಾಕ ಅಂಶಗಳನ್ನು ಮೈಗೂಡಿಸಿಕೊಂಡು ಮುಂದಡಿ ಇಡಬೇಕು ಎಂದು ಹೇಳಿದರು.
ಮಾಹಿತಿ ಕಾರ್ಯಗಾರವನ್ನು ಬಂಟ್ವಾಳ ತಾಲೂಕು ಇರ್ವತ್ತೂರು ಪಂಚಾಯತ್ ನ ಅಭಿವೃದ್ಧಿ ಅಧಿಕಾರಿ ಅವಿನಾಶ್ ಬಿ.ಆರ್, ಬಾಳೆಪುಣಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುನೀಲ್ ಕುಮಾರ್ ಹಾಗೂ ನಾವೂರು ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಚನ್ ಕುಮಾರ್ ನಡೆಸಿಕೊಟ್ಟರು.