Wednesday, April 10, 2024

ಧರ್ಮಸ್ಥಳದಲ್ಲಿ ಭಾರತೀಯ ಲೋಕ ಉತ್ಸವ :ಏಕ್ ಭಾರತ್, ಶ್ರೇಷ್ಠ ಭಾರತ್

ಉಜಿರೆ: ಧರ್ಮ ಮತ್ತು ಸಂಸ್ಕೃತಿಯಲ್ಲಿ ವಿವಿಧತೆಯಲ್ಲಿ ಏಕತೆಯನ್ನು ಸಾಧಿಸಿರುವುದು ಭಾರತದ ವೈಶಿಷ್ಟ್ಯವಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.
ಕೇಂದ್ರ ಸರ್ಕಾರದ ಸಂಸ್ಕೃತಿ ಸಚಿವಾಲಯದ ಅಧೀನದ ತಂಜಾವೂರಿನ ದಕ್ಷಿಣ ವಲಯ ಸಂಸ್ಕೃತಿ ಕೇಂದ್ರದ ಆಶ್ರಯದಲ್ಲಿ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾ ಭವನದಲ್ಲಿ ಭಾರತೀಯ ಲೋಕ ಉತ್ಸವ, ಧರ್ಮಸ್ಥಳ -2020 ಸಾಂಸ್ಕೃತಿಕ ಕಾರ್ಯಕ್ರಮವನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದರು.

ದೀಪ ಬೆಳಗಿಸಿ, ಡೋಲು ಬಾರಿಸಿ ಭಾರತ್ ಮಾತಾ ಕಿ ಜೈ ಎಂಬ ಘೋಷಣೆಯೊಂದಿಗೆ ಉದ್ಘಾಟನಾ ಭಾಷಣವನ್ನು ಪ್ರಾರಂಭಿಸಿದ ಹೆಗ್ಗಡೆಯವರು, ಭೌಗೋಳಿಕವಾಗಿ, ಧಾರ್ಮಿಕ ನಂಬಿಕೆ, ನಡವಳಿಕೆ, ಆಚಾರ- ವಿಚಾರ, ಬಳಸುವ ಭಾಷೆಯಲ್ಲಿ ನಾವು ವಿಭಿನ್ನವಾಗಿದ್ದರೂ, ಧರ್ಮ ಮತ್ತು ಸಂಸ್ಕೃತಿಯ ನೆಲೆಯಲ್ಲಿ ನಾವೆಲ್ಲರೂ ಭಾವನಾತ್ಮಕವಾಗಿ ಒಂದೇ ಆಗಿದ್ದೇವೆ.
ಹೂ ಮಾಲೆಯಲ್ಲಿ ವಿವಿಧ ಬಣ್ಣದ ಹಾಗೂ ಜಾತಿಯ ಹೂಗಳನ್ನು ಪೋಣಿಸಿದರೂ ಮಾಲೆ ಆಕರ್ಷಕವಾಗಿರುತ್ತದೆ. ಗಾಂಧೀಜೀಯವರು ಕೂಡಾ ಧರ್ಮದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ಪಡೆಯಲು ಪ್ರಯತ್ನಿಸಿದರು. ಧರ್ಮಸ್ಥಳದಲ್ಲಿರುವ ಯಕ್ಷಗಾನ ಮಂಡಳಿಗೆ 200 ವರ್ಷಗಳ ಭವ್ಯ ಇತಿಹಾಸವಿದ್ದು, ಧರ್ಮ, ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂರಕ್ಷಣೆಗೆ ಅದು ಶ್ರಮಿಸುತ್ತಿದೆ ಎಂದು ಹೆಗ್ಗಡೆಯವರು ಹೇಳಿದರು.
ಬೇರೆ ರಾಜ್ಯಗಳಿಂದ ಬಂದವರಿಗೆ ನಮ್ಮ ರಾಜ್ಯದ ವಿವಿಧ ರೀತಿಯ ಆಹಾರ ಪದಾರ್ಥಗಳನ್ನು ನೀಡಲಾಗುವುದು. ಇಲ್ಲಿನ ಭಾಷೆ, ಸಂಸ್ಕೃತಿ ಹಾಗೂ ಆಚಾರ- ವಿಚಾರಗಳನ್ನು ಇತರ ರಾಜ್ಯದವರು ಪರಿಚಯ ಮಾಡಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

ತಂಜಾವೂರಿನ ದಕ್ಷಿಣ ವಲಯ ಸಂಸ್ಕೃತಿ ಕೇಂದ್ರದ ನಿರ್ದೇಶಕ ಪ್ರೊ.ಬಾಲಸುಹ್ಮಣ್ಯಮ್‌ ಮಾತನಾಡಿ, ಯುವಜನತೆ ದೇಶದ ಅಮೂಲ್ಯ ಮಾನವ ಸಂಪನ್ಮೂಲವಾಗಿದ್ದು, ನಮ್ಮ ಸನಾತನ ಧರ್ಮ, ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಸಂರಕ್ಷಿಸುವ ಹೊಣೆಗಾರಿಕೆ ಅವರಿಗಿದೆ. ಆದುದರಿಂದಲೇ ಕೇಂದ್ರ ಸರ್ಕಾರದ ಸಂಸ್ಕೃತಿ ಸಚಿವಾಲಯ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು, ಗ್ರಾಮೀಣ ಪ್ರದೇಶದ ಜನರು ಹಾಗೂ ಯುವಜನತೆ ಕಾರ್ಯಕ್ರಮದ ಸದುಪಯೋಗ ಪಡೆದು ಏಕ್ ಭಾರತ್, ಶ್ರೇಷ್ಠ ಭಾರತ್ ಎಂದು ಸಾಧಿಸಿ ತೋರಿಸಬೇಕು ಎಂದು ಅವರು ಸಲಹೆ ನೀಡಿದರು.
ಧರ್ಮ ಮತ್ತು ಸಂಸ್ಕೃತಿಗೆ ಅವಿನಾಭಾವ ಸಂಬಂಧವಿದ್ದು, ಇದನ್ನು ಉಳಿಸಿ ಬೆಳೆಸುವುದು ಹಾಗೂ ಸಂರಕ್ಷಿಸುವುದು ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ಉಜಿರೆ ಎಸ್.ಡಿ.ಎಮ್. ಕಾಲೇಜಿನ ಪ್ರಾಂಶುಪಾಲ ಡಾ.ಎಸ್. ಸತೀಶ್ವಂದ್ರ ಸ್ವಾಗತಿಸಿದರು.ಪ್ರೊ.ಸುನಿಲ್ ಪಂಡಿತ್‌ ಕಾರ್ಯಕ್ರಮ ನಿರ್ವಹಿಸಿದರು. ಅಸ್ಸಾಮಿನ ಜಾನಪದ ಬಹೂ ನೃತ್ಯ ಪ್ರದರ್ಶನ ಎಲ್ಲರ ಕಣ್ಮನ ಸೆಳೆಯುವಲ್ಲಿ ಯಶಸ್ವಿಯಾಯಿತು.
ಕಾಶ್ಮೀರ, ಕೇರಳ, ಮಿಜೋರಾಂ ಮತ್ತು ಕರ್ನಾಟಕದ ಜಾನಪದ ನೃತ್ಯಗಳ ಪ್ರದರ್ಶನ ನಡೆಯಿತು.
ಉಜಿರೆಯಲ್ಲಿ ಎರಡು ದಿನ ಕಾರ್ಯಕ್ರಮ :ಉಜಿರೆಯಲ್ಲಿರುವ ವನರಂಗ ಬಯಲು ಮಂದಿರದಲ್ಲಿ ಬುಧವಾರ ಮತ್ತು ಗುರುವಾರ (ದಿನಾಂಕ: 11 ಮತ್ತು 12) ಸಂಜೆಗಂಟೆ 6.30 ರಿಂದ 8.30ರ ವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರದರ್ಶನ ಆಯೋಜಿಸಿದ್ದು, ಆಸಕ್ತರಿಗೆ ವೀಕ್ಷಿಸಲು ಮುಕ್ತ ಅವಕಾಶವಿದೆ ಎಂದು ಸಂಘಟಕರು ತಿಳಿಸಿದ್ದಾರೆ.

More from the blog

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…. ರಿಸಲ್ಟ್​ ಚೆಕ್ ಮಾಡೋದು ಹೇಗೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ನಾಳೆ...

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...