Saturday, April 6, 2024

ಸೂರಿಕುಮೇರ್ ಬೊರಿಮಾರ್ ಸೈಂಟ್ ಜೋಸೆಫ್ ಚರ್ಚ್ ನಲ್ಲಿ ಕ್ರೈಸ್ತ ಶಿಕ್ಷಣ ದಿನಾಚರಣೆ

ಬಂಟ್ವಾಳ: ಕ್ರೈಸ್ತ ಶಿಕ್ಷಣ ನಮ್ಮ ಬದುಕಿಗೆ ಸುಂದರವಾದ ರೂಪ ನೀಡುತ್ತದೆ, ಇದರ ಮಹತ್ವವನ್ನು ಅರಿಯುವುದರ ಜೊತೆಗೆ ಸಮಾಜದಲ್ಲಿ ಮಾದರಿ ಪ್ರಜೆಗಳಾಗಿ‌ ಬಾಳ್ವೆ ನಡೆಸಬೇಕು ಎಂದು ಸೂರಿಕುಮೇರು ಬೊರಿಮಾರ್ ಸೈಂಟ್ ಜೋಸೆಫ್ ಚರ್ಚಿನ ಧರ್ಮಗುರು‌ ವಂ.ಫಾದರ್ ಗ್ರೆಗರಿ ಪಿರೇರಾ ಹೇಳಿದರು.


ಸೂರಿಕುಮೇರು‌ವಿನಲ್ಲಿರುವ ಸೈಂಟ್ ಜೋಸೆಫ್‌ ಚರ್ಚ್ ನಲ್ಲಿ ಭಾನುವಾರ ದಿವ್ಯ ಬಲಿಪೂಜೆಯನ್ನು ನೆರವೇರಿಸಿದ ಬಳಿಕ ಕ್ರೈಸ್ತ ಶಿಕ್ಷಣ ದಿನಾಚರಣೆಯ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಆಶೀರ್ವಚನ‌ ನೀಡಿದರು. ಚರ್ಚ್ ನ ಪಾಲನಾ ಮಂಡಳಿ ಉಪಾಧ್ಯಕ್ಷ ಎಲಿಯಾಸ್ ಪಿರೇರಾ ಮಾತನಾಡಿ, ಕ್ರೈಸ್ತ ಶಿಕ್ಷಣ ಸಾರಿ ಹೇಳುವ ಎಲ್ಲಾ ಸಂಸ್ಕಾರಗಳನ್ನು ಅಳವಡಿಸುವುದರ ಜೊತೆಗೆ ತಂದೆತಾಯಿಗೆ ವಿಧೇಯರಾಗಿ ಒಳ್ಳೆಯ ಜೀವನ‌ ನಡೆಸುವಂತೆ ಕರೆ ನೀಡಿದರು.

ಸಿಸ್ಟರ್ ನ್ಯಾನ್ಸಿ, ಮೇರಿ ಡಿ’ಸೋಜ, ಅನಿತಾ ಮಾರ್ಟೀಸ್, ಸ್ಟೀವನ್ ಪಾಯ್ಸ್, ಲೂಸಿ ಡಿಕುನ್ಹಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿಶಿಷ್ಟವಾಗಿ ಆಯೋಜನೆಗೊಂಡಿದ್ದ ಕ್ರೈಸ್ತ ಶಿಕ್ಷಣ ದಿನಾಚರಣೆಯ ಅಂಗವಾಗಿ ಬಲಿಪೂಜೆಯ ಸಂದರ್ಭ ವಿದ್ಯಾರ್ಥಿಗಳು ಕ್ರೈಸ್ತ ಶಿಕ್ಷಣ ಪಡೆದಿರುವುದಕ್ಕೆ ಕೃತಜ್ಞತಾಪೂರ್ವಕವಾಗಿ ದೇವರಿಗೆ ಕಾಣಿಕೆಯನ್ನು ಅರ್ಪಿಸಿದರು. ಬಳಿಕ ವಿದ್ಯಾರ್ಥಿಗಳು ಬೈಬಲ್ ನಿಂದ ಆಯ್ದ ವಿಚಾರಗಳಿಗೆ ಸಂಬಂಧಿಸಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿದರು.

ಇದೇ ಸಂದರ್ಭ ದಲ್ಲಿ ಚರ್ಚ್ ನಲ್ಲಿ ಕ್ರೈಸ್ತ ಶಿಕ್ಷಣ ಪರೀಕ್ಷೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳನ್ನು ತರಗತಿವಾರು ಸನ್ಮಾನಿಸಲಾಯಿತು. ಕ್ರೈಸ್ತ ಶಿಕ್ಷಣದಲ್ಲಿ ಚಿನ್ನದ ಪದಕ ಪಡೆದ ಜೆನಿಷ್ ಮಾರ್ಟಿಸ್ ಹಾಗೂ ಮನೆಮಂದಿಯನ್ನು ಗೌರವಿಸಲಾಯಿತು.

ಕರ್ನಾಟಕ ಮಂಗಳೂರು ಕೊಂಕಣಿ ಸಂಸ್ಥೆಯಿಂದ ಆಯೋಜಿಸಿದ್ದ ಡಿಪ್ಲೊಮಾ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಶಿಕ್ಷಕಿ ಐಡಾ ಲಸ್ರಾದೊ ಪ್ರಮಾಣಪತ್ರ ನೀಡಿ ಗೌರವಿಸಿದರು. ಕ್ರೈಸ್ತ ಶಿಕ್ಷಣವನ್ನು ಬೋಧಿಸುತ್ತಿರುವ ಎಲ್ಲಾ ಶಿಕ್ಷಕರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ರೋಷನ್ ಬೊನಿಫಾಸ್ ಮಾರ್ಟಿಸ್ ಹಾಗೂ ಮೆಲಿಟಾ ಪಾಯ್ಸ್ ಕಾರ್ಯಕ್ರಮ ನಿರೂಪಿಸಿದರು. ಕ್ರೈಸ್ತ ಶಿಕ್ಷಣ ದಿನಾಚರಣೆಯ ಅಂಗವಾಗಿ ಎಲ್ಲಾ ಆಮಂತ್ರಿತರಿಗೆ ಉಪಹಾರ, ಸಿಹಿ ತಿಂಡಿ ಹಾಗೂ ಭೋಜನ ವ್ಯವಸ್ಥೆ ಕಲ್ಪಿಸಲಾಗಿತ್ತು.

 

More from the blog

ಮಂಗಳೂರು: ‘ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್’ ಸಂಸ್ಥೆಯ ಸಂಗೀತ ಕ್ಷೇತ್ರದಲ್ಲಿ ಸಂಪುಟ 2′ ರ ನೂತನ ಕೃತಿ ಲೋಕಾರ್ಪಣೆ

ಮಂಗಳೂರು: ಮಂಗಳೂರಿನ ಕುಲಶೇಖರದಲ್ಲಿರುವ 'ಸ್ವೀಟ್ ಸಿಂಫನಿ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್' ಸಂಸ್ಥೆಯ ಪ್ರಕಾಶನದಲ್ಲಿ ಇಂಗ್ಲಿಷ್, ಹಿಂದಿ ಮತ್ತು ಕನ್ನಡದ ಜನಪ್ರಿಯ ಹಾಡುಗಳನ್ನು ಪಾಶ್ಚಿಮಾತ್ಯ ನೊಟೇಶನ್ ಮೂಲಕ ವಯಲಿನ್, ಗಿಟಾರ್ ಮತ್ತು ಕೀಬೋರ್ಡ್ ನಲ್ಲಿ...

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌ : ವಾರಾಂತ್ಯದಲ್ಲಿ ಚಿನ್ನದ ದರ ತುಸು ಇಳಿಕೆ…

ಬೆಂಗಳೂರು: ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ ಶುರುವಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಏರಿಕೆ ಕಂಡಿದ್ದ ಬಂಗಾರದ ಬೆಲೆ ಇದೀಗ ಇಳಿಕೆಯಾಗಿದೆ. ನಿನ್ನೆಯ ದರಕ್ಕೆ ಹೋಲಿಸಿದರೆ 10ಗ್ರಾಂ ಚಿನ್ನದ ಮೇಲೆ 450 ರೂ...

ನೀತಿ ಸಂಹಿತೆ ಇರುವಾಗ ಆಶ್ಲೇಷ ಬಲಿ ಮಂಟಪ ಕಾಮಗಾರಿ ಆರಂಭ ಸಮರ್ಪಕವಲ್ಲ- ಹರೀಶ್ ಇಂಜಾಡಿ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಈ ಹಿಂದಿನ ಆಡಳಿತ ಮಂಡಳಿಯ ಕೊನೇ ದಿನಗಳಲ್ಲಿ ದಾನಿಗಳು ಕ್ಷೇತ್ರದಲ್ಲಿ ಆಶ್ಲೇಷ ಬಲಿ ಮಂಟಪ ನಿರ್ಮಿಸಲು ಮುಂದೆ ಬಂದರು. ಇದು ಸ್ವಾಗತಾರ್ಹ ಬೆಳವಣಿಗೆ. ಆದರೆ...

ಪ್ರಧಾನಿ ಮೋದಿ ಕರೆ : ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ  ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರತಿಯೊಬ್ಬರ ಕೈ ಮೇಲೆ ಕಮಲದ ಹಚ್ಚೆ ಹಾಕಿ “ಮೆಹಂದಿ ಅಭಿಯಾನ" ನಡೆಸುವಂತೆ ಸೂಚನೆ ನೀಡಿದ್ದಾರೆ. ಜತೆಗೆ ಮೋದಿ...