Thursday, October 26, 2023

ನಾಳೆಯೂ ದ.ಕ. ಸಂಪೂರ್ಣ ಬಂದ್

Must read

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರು ಪತ್ತೆಯಾದ ಕಾರಣ ನಾಳೆಯೂ ದಕ್ಷಿಣ ಕನ್ನಡ ಜಿಲ್ಲೆ ಸಂಪೂರ್ಣ ಬಂದ್ ಮಾಡಲು ದ.ಕ‌ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಬಂದ್ ಹಿನ್ನೆಲೆ ಅಂಗಡಿ ಮುಂಗಟ್ಟುಗಳು ಮುಚ್ಚಲು ಸೂಚಸಿದೆ. ಸಾರ್ವಜನಿಕ ಓಡಾಟವೂ ಬಂದ್ ಆಗಿರಲಿದ್ದು, ಅಗತ್ಯ ವಸ್ತುಗಳನ್ನು ಕೊಂಡುಕೊಳ್ಳಲು ನೀಡಿದ್ದ ಸಮಯವನ್ನೂ ಹಿಂಪಡೆಯಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಜಿಲ್ಲಾಡಳಿತ ತಿಳಿಸಿದೆ.

More articles

Latest article