ನವದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1336 ಮಂದಿಗೆ ಕೊರೊನಾ ಪಾಸಿಟಿವ್ ವೈರಸ್ ತಗಲಿರುವುದು ದೃಡಪಟ್ಟಿರುವುದು ಆತಂಕ ಕಾರಿ ಬೆಳವಣಿಗೆ ಯಾಗಿದೆ.

ದೇಶಾದ್ಯಂತ ಮಾರಣಾಂತಿಕ ಕೊರೊನಾ ವೈರಸ್ ಆತಂಕ ತಂದೊಡ್ಡಿದ್ದು, ದಿನೇ ದಿನೇ ಸೋಂಕು ಪೀಡಿತರ ಸಂಖ್ಯೆ ಏರಿಕೆಯಾಗುತ್ತಿದೆ. ಸೋಂಕು ನಿಯಂತ್ರಣಕ್ಕೆ ಕಠಿಣ ಹಾಗೂ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದರೂ ಪರಿಸ್ಥಿತಿ ನಿಯಂತ್ರಣ ಸರ್ಕಾರಗಳಿಗೆ ತಲೆನೋವಾಗಿ ಪರಿಣಮಿಸಿದೆ.

ದೇಶದಲ್ಲಿ ಸೋಂಕು ಪೀಡಿತರ ಸಂಖ್ಯೆ 18,601ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಕೇಂದ್ರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ದೇಶದಲ್ಲಿ ಕಳೆದ 24 ಗಂಟೆಯಲ್ಲಿ ಹೊಸದಾಗಿ 1336 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಕಿಲ್ಲರ್ ಕೊರೊನಾಗೆ 47 ಮಂದಿ ಬಲಿಯಾಗಿದ್ದಾರೆ. ಇನ್ನು 18,601 ಮಂದಿ ಸೋಂಕಿತರ ಪೈಕಿ 14,759 ಮಂದಿ ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು 3252 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದೇ ವೇಳೆ, ಈವರೆಗೆ ದೇಶದಲ್ಲಿ ಡೆಡ್ಲಿ ಕೊರೊನಾಗೆ 590 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿಯೂ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಲೆ ಇದೆ ವಿನಹ ಕಂಟ್ರೋಲ್ ಗೆ ಬರುತ್ತಿಲ್ಲ ಎಂಬುದು ಒಂದು ರೀತಿಯ ಭಯ ಹುಟ್ಟಿಸಿದೆ.
ದ.ಕ.ಜಿಲ್ಲೆಯಲ್ಲಿ ಕೂಡ ಇನ್ನೇನು ಕೋವಿಡ್ 19 ಪ್ರಕರಣಗಳ ಸಂಖ್ಯೆ ಇಳಿಮುಖವಾಗಿ ಕ್ಲೀಯರ್ ಸಿಟಿ ಅಗುತ್ತೆ ಅಂದುಕೊಂಡರೆ ಬಂಟ್ವಾಳ ದ ಸಾವನ್ನಪ್ಪಿದ ಮಹಿಳೆಗೆ ಸೊಂಕು ದೃಢಪಡಿಸಿತು. ಅ ಮೂಲಕ ಮತ್ತೆ ಜಿಲ್ಲೆಯ ಜನರು ಒಂದಷ್ಟು ಗೊಂದಲಕ್ಕೆ ಸಿಲುಕಿದ್ದಾರೆ.
ಜನ ಮುಂಜಾಗ್ರತೆ ವಹಸಿ ಕೋವಿಡ್ 19 ವಿರುದ್ಧ ಹೋರಾಡಬೇಕಾಗಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here