Saturday, April 20, 2024

ಚಂಪಾ ಮನೆಗೆ ಶಾಸಕ ವೇದವ್ಯಾಸ ಕಾಮತ್ ಭೇಟಿ

ಮಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಗೃಹ ರಕ್ಷದಳ ಮಹಿಳಾ ಸಿಬ್ಬಂದಿ ಮಂಗಳೂರು ಶಕ್ತಿನಗರ ಮೊಗರೋಡಿ ನಿವಾಸಿ ಚಂಪಾ ಅವರ ಮನೆಗೆ ಮಂಗಳೂರು ಶಾಸಕ ವೇದವ್ಯಾಸ ಕಾಮತ್ ಭೇಟಿ ನೀಡಿದ್ದಾರೆ.
ಅನಾರೋಗ್ಯ ಮತ್ತು ಆರ್ಥಿಕವಾಗಿ ತೊಂದರೆ ಯಲ್ಲಿರುವ ಚಂಪಾ ಅವರನ್ನು ಕೂಡಲೇ ಆಸ್ಪತ್ರೆ ಗೆ ದಾಖಲಿಸುವ ಕಾರ್ಯಗಳು ಶೀಘ್ರವಾಗಿ ನಡೆಯಬೇಕಾಗಿದೆ. ಈವರಗೆ ಆಸ್ಪತ್ರೆಗೆ ದಾಖಲಿಸಿ ಔಷಧದ ಭರವಸೆ ನೀಡಿದ ಯಾರು ಕೂಡ ಅ ಸಾಹಸಕ್ಕೆ ಮುಂದಾಗಿಲ್ಲ ಎಂದು ಅವರು ಸ್ವತಃ ನಮ್ಮ ಬಂಟ್ವಾಳದ ಜೊತೆ ಬೇಸರ ವ್ಯಕ್ತಪಡಿಸಿದ್ದಾರೆ. ವೇದವ್ಯಾಸ ಜೊತೆ ಅಗಮಿಸಿದ ಗೃಹ ರಕ್ಷಕದಳ ಕಮಾಂಡೆಂಟ್ ಅವರು ಇಪ್ಪತ್ತು ಸಾವಿರ ನಗದು ಹಾಗೂ ವೀರಕೇಸರಿ ಸಂಘಟನೆ ಹದಿನೈದು ಸಾವಿರ ರೂ ಜೊತೆಗೆ ಅನೇಕ ಸಂಘ ಸಂಸ್ಥೆಗಳು, ಪೋಲೀಸ್ ಸಿಬ್ಬಂದಿಗಳು ಮತ್ತು ಕೆಲವು ಮಂದಿ ವೈಯಕ್ತಿಕ ವಾಗಿ ಧನಸಹಾಯ ದಿನಬಳಕೆಯ ವಸ್ತುಗಳನ್ನು ನೀಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಆದರೆ ಕಾಲುಗಳಲ್ಲಿ ಬಲವಿಲ್ಲದೆ ನಡೆದಾಡಲು ಸಾಧ್ಯವಿಲ್ಲ ಹಾಗಾಗಿ ಶೀಘ್ರವಾಗಿ ಇವರಿಗೆ ಚಿಕಿತ್ಸೆ ಕೊಡಿಸುವ ಕೆಲಸ ಆಗಬೇಕಾಗಿದೆ, ಅವರ ಕಷ್ಟದ ಜೀವನಕ್ಕೆ ದಾರಿ ದೀಪವಾಗುವರು ಮುಂದೆ ಬರಬೇಕಾಗಿದೆ, ಅದಕ್ಕಾಗಿ ಅವರು ಕಾದು ಕುಳಿತಿದ್ದಾರೆ.

More from the blog

ಜನಪರವಾದ ಕೆಲಸ ಮಾಡದ ಬಿಜೆಪಿಗೆ ಸೋಲು ಖಚಿತ-ಚಾಮರಸ ಮಾಲೀಪಾಟೀಲ್

ಬಂಟ್ವಾಳ: 2024 ರ ಚುನಾವಣೆಯಲ್ಲಿ ಬಿಜೆಪಿ ಹಾಗೂ ಮಿತ್ರಪಕ್ಷವನ್ನು ಸೋಲಿಸುವ ತೀರ್ಮಾನವನ್ನು ಕರ್ನಾಟಕ ರಾಜ್ಯ ರೈತ ಸಂಘ ಮಾಡಿದ್ದು, ಈ ದೃಷ್ಟಿಯಿಂದ ರೈತರ ಮನವೊಲಿಸುವ ಕಾರ್ಯದಲ್ಲಿ ತೊಡಗಿದ್ದೇವೆ, ಈ ಬಾರಿ ಬಿಜೆಪಿ ನೆಲಕಚ್ಚುವುದು...

ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ಭೇಟಿ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 17-ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ರವರು ದಿನಾಂಕ 19-04-2024 ರಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಭೇಟಿ ನೀಡಿದರು. ಸೂಕ್ಷ್ಮ ಮತಗಟ್ಟೆಗಳಿರುವ ಪ್ರದೇಶಗಳಿಗೆ...

ಟ್ಯಾಂಕರ್ ಹರಿದು ಪಾದಚಾರಿ ಸ್ಥಳದಲ್ಲೇ ಸಾವು

ಮಂಗಳೂರು: ಟ್ಯಾಂಕರ್ ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಬೆಳಗ್ಗೆ ಕೂಳೂರಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶ ಮೂಲದ ಕಾರ್ಮಿಕ ಗುಡ್ಡು ಯಾದವ್ ಎನ್ನಲಾಗಿದೆ ಯಾದವ್ ರಸ್ತೆ ಬದಿ‌ ನಡೆದುಕೊಂಡು...

ಏ.21ರಂದು ನಮ್ಮ ನಡೆ ಮತಗಟ್ಟೆಯ ಕಡೆ ಅಭಿಯಾನ

ಮತದಾರರನ್ನು ಮತಗಟ್ಟೆಗೆ ಸೆಳೆಯುವ ಸಲುವಾಗಿ ಚುನಾವಣಾ ಆಯೋಗ ಸ್ವೀಪ್ ಕಾರ್ಯಕ್ರಮದ ಮೂಲಕ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಅದರಂತೆ ಎ.21ರಂದು ಎಲ್ಲಾ ಬೂತ್ ಮತಗಟ್ಟೆಗಳಲ್ಲಿ ನಮ್ಮ ನಡೆ ಮತಗಟ್ಟೆಯ ಕಡೆ ಅಭಿಯಾನ ಹಮ್ಮಿಕೊಂಡಿದ್ದು, ಬಂಟ್ವಾಳ...