Thursday, April 11, 2024

ಬಿಸಿರೋಡಿನಲ್ಲಿ ಪೊಲೀಸರಿಂದ ಅನಗತ್ಯವಾಗಿ ತಿರುಗಾಟ ನಡೆಸುವ ವಾಹನಗಳ ವಶಕ್ಕೆ

ಬಂಟ್ವಾಳ: ಮೆಲ್ಕಾರ್ ಟ್ರಾಫಿಕ್ ಎಸ್.ಐ.ರಾಮನಾಯ್ಕ್ ಅವರು ಬೆಳಿಗ್ಗೆಯಿಂದಲೇ ಬಿಸಿರೋಡಿನಲ್ಲಿ ಕಾರ್ಯಚರಣೆಗಿಳಿದಿದ್ದಾರೆ.
ಲಾಕ್ ಡೌನ್ ಅವಧಿಯಲ್ಲಿ ಅನಗತ್ಯವಾಗಿ ತಿರುಗಾಟ ನಡೆಸುವ ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ದಿನಬಳಕೆಯ ವಸ್ತುಗಳ ನೆಪದಲ್ಲಿ ಕಾರಿನಲ್ಲಿ ಎರಡಕ್ಕಿಂತ ಅಧಿಕ ಜನ ಹಾಗೂ ಬೈಕಿನಲ್ಲಿ ಇಬ್ಬರು ಅನಗತ್ಯವಾಗಿ ತಿರುಗಾಟ ನಡೆಸುವ ವೇಳೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಟ್ವಾಳದಲ್ಲಿ ಕಳೆದ ಆದಿತ್ಯವಾರ ಕೊರೊನಾದಿಂದ ಮಹಿಳೆ ಮೃತಪಟ್ಟ ಹಿನ್ನೆಲೆಯಲ್ಲಿ ಬಿಸಿರೋಡು ಸಂಪೂರ್ಣ ಕಟ್ಟುನಿಟ್ಟಾಗಿ ಆದೇಶ ಪಾಲಿಸುವ ಬಗ್ಗೆ ಮತ್ತು ಪೊಲೀಸರಿಗೆ ಪುಲ್ ಪವರ್ ನೀಡಲಾಗಿದೆ ಎಂದು ಸಂಸದ ಹಾಗೂ ಸಚಿವರು ‌ತಿಳಿಸಿದ್ದರು. ಅ ಬಳಿಕವೂ ಜನರ ಓಡಾಟ ಕಡಿಮೆಯಾಗದ ಹಿನ್ನೆಲೆಯಲ್ಲಿ ಇಂದು ಪೊಲೀಸರು ಕಾರ್ಯಚರಣೆಗೆ ಇಳಿದಿದ್ದಾರೆ.

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...