Wednesday, April 10, 2024

ಲಾಕ್ ಡೌನ್ ಅವಧಿಯಲ್ಲಿ ಅಕ್ರಮ ಮರಳುಗಾರಿಕೆ

ಬಂಟ್ವಾಳ: ಕೊರೊನಾ ಲಾಕ್ ಡೌನ್ ಅವಧಿಯಲ್ಲಿ ಕರಿಯಂಗಳ ಎಂಬಲ್ಲಿ ಪಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿರುವ ಬಗ್ಗೆ ಖಚಿತ ಮೇರೆಗೆ ದಾಳಿ ನಡೆಸಿದ ಪ್ರೋಬೆಷನರಿ ಐ.ಪಿ.ಎಸ್. ರಂಜಿತ್ ಅವರು ದಾಳಿ ನಡೆಸಿ ಲಕ್ಷಾಂತರ ರೂ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡು ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿಸಿದ್ದಾರೆ.

ಒರ್ವನನ್ನು ವಶಕ್ಕೆ ಪಡೆದುಕೊಂಡ ಪೋಲೀಸರು ನಾಲ್ಕು ಜನರ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಂಟ್ವಾಳ ತಾಲ್ಲೂಕಿನ ಕರಿಯಂಗಳ ಗ್ರಾಮದ ಕರಿಯಂಗಳ ಎಂಬಲ್ಲಿ ಪಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳು ಗಾರಿಕೆ ನಡೆಸುತ್ತಿದ್ದು , ಬಳಿಕ ಟಿಪ್ಪರ್ ಲಾರಿಯ ಮೂಲಕ ಅಕ್ರಮವಾಗಿ ಮರಳು ಸಾಗಾಟ ಮಾಡಲಾಗುತ್ತಿತ್ತು ಎಂ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪ್ರೋಬೆಷನರಿ ಐ.ಪಿ.ಎಸ್.ರಂಜಿತ್ ಅವರ ನೇತ್ರತ್ವದ ಪೋಲೀಸರು ಒರ್ವ ಆರೋಪಿ ಸಹಿತ ಸುಮಾರು 20 ಲಕ್ಷ ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಸ್ಥಳದಲ್ಲಿದ್ದ 10 ಲೋಡ್ ಮರಳು, ಮರಳು ತುಂಬಿಸಲು ಉಪಯೋಗಿಸುತ್ತಿದ್ಧ 1 ಹಿಟಾಚಿ, 3 ಬೋಟ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಲಾರಿ ಚಾಲಕ ಪಾಂಡುರಂಗ ಬಂಧಿತ ಆರೋಪಿ.
ಉಳಿದಂತೆ ಆಕೇಶ್, ನವೀನ್, ಶಾಕೀರ್ ಮತ್ತು ಕಬೀರ್ ಎಂಬ ನಾಲ್ವರ ಮೇಲೆ ಪ್ರಕರಣ ದಾಖಲಾಗಿದೆ.

ಅವರು ಪರವಾನಿಗೆ ರಹಿತವಾಗಿ ನದಿಯಲ್ಲಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂಬ ಕಾರಣಕ್ಕೆ 379 ಐ.ಪಿ.ಎಸ್.ಮರಳು ಮತ್ತು ಖನಿಜ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಲಾಕ್ ಡೌನ್ ಯಾರಿಗೆ ಈ ರೀತಿಯಲ್ಲಿ ಅಕ್ರಮ ವ್ಯವಹಾರಗಳಿಗೆ ಇದು ಸಕಾಲವಾಗಿದೆ ? ಎಂಬ ಆರೋಪಗಳು ಕೇಳಿಬರುತ್ತಿದೆ.
ಸಾಮಾನ್ಯ ಜನ ಲಾಕ್ ಡೌನ್ ಆದೇಶ ಕಟ್ಟುನಿಟ್ಟಾಗಿ ಪಾಲಿಸಿದರೆ ಸ್ಥಿತಿವಂತರು ನಿಯಮಗಳನ್ನು ಗಾಳಿಗೆ ತೂರಿ ಅಕ್ರಮ ವ್ಯವಹಾರ ಗಳಲ್ಲಿ ತೊಡಗಿಸಿಕೊಂಡಿರುವುದು ಪೋಲೀಸ್ ದಾಳಿಯ ಬಳಿಕ ಬೆಳಿಕಿಗೆ ಬರುತ್ತಿದೆ.

More from the blog

ಎ.14ರ ಪ್ರಧಾನಿ ಮೋದಿ ಸಮಾವೇಶ ರದ್ದು : ರೋಡ್ ಶೋದಲ್ಲಿ ಮಾತ್ರ ಭಾಗಿ

ಮಂಗಳೂರು: ಏಪ್ರಿಲ್ 14 ರಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಧಾನಿ ಮೋದಿ ಬೃಹತ್ ಸಮಾವೇಶಕ್ಕೆ ಆಯೋಜನೆ ಮಾಡಲಾಗಿತ್ತು. ಆದರೆ ಇದೀಗ ಕೊನೆ ಕ್ಷಣದಲ್ಲಿ ಈ ಸಮಾವೇಶ ರದ್ದುಪಡಿಸಲಾಗಿದೆ. ಏಪ್ರಿಲ್ 14ರಂದು ಮಂಗಳೂರಿನಲ್ಲಿ...

ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ….?​ ಇಲ್ಲಿದೆ ಮಾಹಿತಿ

ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶೇ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಶಾಲಾ ಸಮುದಾಯದತ್ತ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಮಾಣಿ: ಶೈಕ್ಷಣಿಕ ವಿಚಾರಗಳ ಸಂಬಂಧಿತವಾದ ಒಳ್ಳೆಯ ಚಚೆ೯ಗಳು ಮೂಡಿಬಂದಾಗ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ಕೆಲಸಗಳು ಮೂಡಲು ಸಾಧ್ಯ ‌. ಪ್ರತಿಯೊಬ್ಬ ವಿದ್ಯಾರ್ಥಿ, ಪೋಷಕರು,ತನ್ನ ಶಾಲೆಯ ಬಗ್ಗೆ ಒಳ್ಳೆಯ ಭಾವನೆ, ಸಂಬಂಧ ಇರಬೇಕು...