Wednesday, April 10, 2024

ಕೊರೊನಾ ಲಾಕ್ ಡೌನ್ ಅದರೂ ಹಿಂಸಾತ್ಮಕ ರೀತಿಯಲ್ಲಿ ಗೋಸಾಗಟಕ್ಕೆ ಬ್ರೇಕ್ ಬಿದ್ದಿಲ್ಲ

ವಿಟ್ಲ: ಕೊರೊನಾ ಭೀತಿಯಿಂದ ಜಿಲ್ಲೆ ಲಾಕ್ ಡೌನ್ ಆದರೂ ಕೃಷಿಕರ ಹಟ್ಟಿಯಿಂದ ಅಥವಾ ಮೇಯಲು ಬಿಟ್ಟಿರುವ ದನಗಳ ಕಳವು ಮಾಡಿ ಬಳಿಕ ಅಕ್ರಮ ಸಾಗಾಟ ಮಾಡಿ ವಧೆ ಮಾಡುವ ನೀಚ ಕೃತ್ಯಕ್ಕೆ ಮಾತ್ರ ಬ್ರೇಕ್ ಬಿದ್ದಿಲ್ಲ.

ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಪಿಕಪ್ ವಾಹನದಲ್ಲಿ ಮೂರು ಜಾನುವಾರುಗಳನ್ನು ಸಾಗಿಸುತ್ತಿದ್ದ ಆರೋಪಿ ಸಹಿತ ವಾಹನವನ್ನು ವಿಟ್ಲ ಎಸ್.ಐ.ವಿನೋದ್ ರೆಡ್ಡಿ ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ.
ಬಂಧಿತರಿಂದ ಮೂರು ಜಾನುವಾರು ಹಾಗೂ ಪಿಕಪ್ ವಾಹನ ಒಟ್ಟು 3.24 ಸಾವಿರ ರೂ ಮೌಲ್ಯದ ಸ್ವತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕೋಡಪದವು ಕಂಪದಬೈಲು ನಿವಾಸಿ ಅದ್ರಾಮ ಕೆ. ಬಂಧಿತ ಆರೋಪಿ.
ಇನ್ನಿಬ್ಬರು ಆರೋಪಿಗಳಾದ ರಶೀದ್ ಒಕ್ಕೆತ್ತೂರು, ಖಾದ್ರಿ ಒಕ್ಕೆತ್ತೂರು ಪರಾರಿಯಾದ ಆರೋಪಿಗಳು.
ಪರಾರಿಯಾದ ಇಬ್ಬರು ಆರೋಪಿಗಳ ಕಳವು ಮಾಡಿದ ದನಗಳನ್ನು ವಿಟ್ಲದಲ್ಲಿ ಕಟ್ಟಿ ಹಾಕಿ ಬಳಿಕ ಬಂಧಿತ ಆರೋಪಿಯ ಪಿಕಪ್ ವಾಹನದಲ್ಲಿ ಹಿಂಸಾತ್ಮಕವಾಗಿ ಸಾಗಾಟ ಮಾಡಿ ಬಳಿಕ ವದೆ ಮಾಡುವ ಬಗ್ಗೆ ಆತ ತಿಳಿಸಿದ್ದಾನೆ.
ಇವರ ಮೇಲೆ ಕರ್ನಾಟಕ ಗೋ ಹತ್ಯೆ ನಿಷೇಧ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ

More from the blog

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...

ದ್ವಿತೀಯ ಪಿಯು ಫಲಿತಾಂಶ ಪ್ರಕಟ : ದಕ್ಷಿಣ ಕನ್ನಡ ಜಿಲ್ಲೆಗೆ ಮೊದಲ ಸ್ಥಾನ

ಬೆಂಗಳೂರು: ಮಾರ್ಚ್ 1ರಿಂದ ಮಾರ್ಚ್ 22ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಬುಧವಾರ ಪ್ರಕಟಗೊಂಡಿದೆ. ಬೆಂಗಳೂರಿನಲ್ಲಿ ಶಿಕ್ಷಣ ಇಲಾಖೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ, ಶೇ 81.15 ಮಂದಿ ಉತ್ತೀರ್ಣರಾಗಿದ್ದಾರೆ....

ಏ.10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ…. ರಿಸಲ್ಟ್​ ಚೆಕ್ ಮಾಡೋದು ಹೇಗೆ?

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಪ್ರಕಟಿಸಲಾಗುತ್ತಿದೆ. ಎಲ್ಲ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾದ ಹಿನ್ನಲೆ ನಾಳೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ನಾಳೆ...

ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ : ಇವತ್ತಿನ ‌ಬೆಲೆ ಎಷ್ಟು ಗೊತ್ತಾ…?

ಯುಗಾದಿ ಹಬ್ಬ. ಇದು ಸಂಬಂಧ ಬೆಸೆಯುವ ಹಬ್ಬ. ಅಂದಹಾಗೆಯೇ ದೇಶದಾದ್ಯಂತ ಜನರು ಇಂದು ಸಂಭ್ರಮದಲ್ಲಿದ್ದಾರೆ. ಆದರೆ ಇದರ ನಡುವೆ ಚಿನ್ನದ ಬೆಲೆ ಏರಿಕೆಯ ಬಿಸಿಯಿಂದ ಕೊಂಚ ಬೇಸರವು ಅವರಲ್ಲಿ ಆವರಿಸಿದೆ. ಕಳೆದ ಎರಡು ದಿನಗಳ...