Monday, April 8, 2024

ಬರಿಮಾರು ಗ್ರಾ.ಪಂ. ವ್ಯಾಪ್ತಿಯ ಪಡಿತರ ಚೀಟಿ ವಂಚಿತ ಕುಟುಂಬಗಳಿಗೆ ಶಾಸಕ ರಾಜೇಶ್ ನಾಯ್ಕ್ ಅವರ ವತಿಯಿಂದ ಅಕ್ಕಿ ವಿತರಣೆ

ಬಂಟ್ವಾಳ: ಬರಿಮಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ಪಡಿತರ ಚೀಟಿ ವಂಚಿತ ಕುಟುಂಬಗಳಿಗೆ ಅಕ್ಕಿ ನೀಡುವುದಾಗಿ ಶಾಸಕ ರಾಜೇಶ್ ನಾಯ್ಕ್ ರವರು ಬರಿಮಾರು ಗ್ರಾಮ ಪಂಚಾಯತ್ ನ ಕೋವಿಡ್-19 ಕಾರ್ಯಪಡೆಯ ಸಭೆಯಲ್ಲಿ ಭರವಸೆ ನೀಡಿದ್ದರು. ಅದರಂತೆ, ಬರಿಮಾರು ಗ್ರಾಮಪಂಚಾಯತ್ ನ ಸದಸ್ಯರು ತಮ್ಮ ವಾರ್ಡ್ ಗಳಲ್ಲಿನ ಪಡಿತರ ಚೀಟಿ ವಂಚಿತ ಕುಟುಂಬಗಳ ಮಾಹಿತಿಯನ್ನು ಸಂಗ್ರಹಿಸಿ ತಾ.ಪಂ ಕಾರ್ಯ ನಿರ್ವಹಣಾಧಿಕಾರಿಯವರ ಮೂಲಕ ಶಾಸಕರಿಗೆ ಕಳುಹಿಸಿಕೊಡಲಾಗಿತ್ತು. ಪಟ್ಟಿ ತಲುಪಿದ ಮೂರು ದಿನಗಳೊಳಗೆ ಇದಕ್ಕೆ ಸ್ಪಂದಿಸಿದ ಶಾಸಕರು ಬರಿಮಾರು ಗ್ರಾಮದ ಪಡಿತರ ಚೀಟಿ ವಂಚಿತ ಕುಟುಂಬಗಳಿಗೆ ತಲಾ ಹತ್ತು ಕೆ.ಜಿ ಯ ಅಕ್ಕಿಯ ಚೀಲಗಳನ್ನ ಗ್ರಾಮ ಪಂಚಾಯತ್ ಮೂಲಕ ನೀಡಲು ಕಳುಹಿಸಿಕೊಟ್ಟಿದ್ದರು. ಅಕ್ಕಿಯ ಚೀಲಗಳನ್ನು ಬರಿಮಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಜಿಲ್ಲಾ ಪಂಚಾಯತ್ ಸದಸ್ಯೆ  ಕಮಲಾಕ್ಷಿ ಕೆ. ಪೂಜಾರಿ ಮತ್ತು ಗ್ರಾಮ ಪಂಚಾಯತ್ ಅಧ್ಯಕ್ಷ ವಸಂತ ಪಟ್ಲಕೋಡಿ ಮತ್ತು ಗ್ರಾಮ ಪಂಚಾಯತ್ ಸದಸ್ಯರ ಸಮ್ಮುಖದಲ್ಲಿ ಗ್ರಾಮದ 19 ಪಡಿತರ ಚೀಟಿ ವಂಚಿತ ಕುಟುಂಬಗಳಿಗೆ ಬರಿಮಾರು ಗ್ರಾಮ ಪಂಚಾಯತ್ ಕಛೇರಿಯಲ್ಲಿ ಹಂಚಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೇ  ಅನಿತಾ, ಸದಸ್ಯರಾದ ಗಣೇಶ, ಕಲಾವತಿ, ಜಯಂತ ಹಾಗೂ ಹರಿಕೃಷ್ಣ ಉಪಸ್ಥಿತರಿದ್ದು ತಮ್ಮ ವಾರ್ಡ್ ಗಳಿಗೆ ಸಂಬಂಧಿಸಿದ ಕುಟುಂಬಗಳಿಗೆ ಅಕ್ಕಿಯನ್ನು ವಿತರಿಸಿದರು.

More from the blog

ದ್ವಿತೀಯ ಪಿಯುಸಿ ಫಲಿತಾಂಶ ಶೀಘ್ರ ಪ್ರಕಟ

ಬೆಂಗಳೂರು: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಏಪ್ರಿಲ್ 3 ನೇ ವಾರದಲ್ಲಿ ಪ್ರಕಟಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಫಲಿತಾಂಶ ಪ್ರಕಟಗೊಂಡ ನಂತರ, ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು...

ಇಂದು ಸಂಪೂರ್ಣ ಸೂರ್ಯಗ್ರಹಣ : ಈ ರಾಶಿಯವರಿಗೆ ಕಾದಿದೆ ಆಪತ್ತು

ವರ್ಷದ ಮೊದಲ ಸೂರ್ಯಗ್ರಹಣ ಇಂದು ಸಂಭವಿಸುತ್ತಿದೆ. ಸುಮಾರು 54 ವರ್ಷಗಳ ಬಳಿಕ ಸಂಭವಿಸುತ್ತಿರುವ ಸುದೀರ್ಘ ಸೂರ್ಯಗ್ರಹಣ ಇದಾಗಿದ್ದು, ಮಾಹಿತಿಗಳ ಪ್ರಕಾರ ಏಪ್ರಿಲ್ 8 ರಂದು ಸೂರ್ಯಗ್ರಹಣ ರಾತ್ರಿ 9.12 ರಿಂದ 1.25 ರವರೆಗೆ...

ಬಿಳಿನೆಲೆಗೆ ಬಂದ ನಕ್ಸಲರಿಗೆ ಶೋಧ : 6 ಮೊಬೈಲ್‌, 1 ಲ್ಯಾಪ್‌ಟಾಪ್‌ ಚಾರ್ಜ್‌ ಮಾಡಿಸಿಕೊಂಡ ನಕ್ಸಲರು

ಸುಬ್ರಹ್ಮಣ್ಯ: ಕಡಬ ತಾಲೂಕಿನ ಬಿಳಿನೆಲೆ ಗ್ರಾಮದ ಚೇರು ಎಂಬಲ್ಲಿನ ಅರಣ್ಯದಂಚಿನ ಮನೆಗೆ ಗುರುವಾರ ರಾತ್ರಿ ಭೇಟಿ ನೀಡಿದ್ದ ಮುಸುಕುಧಾರಿ, ಶಸ್ತ್ರಧಾರಿ ನಕ್ಸಲರ ತಂಡದಲ್ಲಿ 6 ಮಂದಿ ಇದ್ದರು ಎನ್ನುವುದು ದೃಢಪಟ್ಟಿದೆ. ಬಂದವರೆಲ್ಲರೂ ಒಂದೇ ರೀತಿಯ...

ವಿಶ್ವ ಹಿಂದೂ ಪರಿಷತ್, ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ “ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ” ಬೃಹತ್ ಪಾದಯಾತ್ರೆ

ಬಂಟ್ವಾಳ: ವಿಶ್ವ ಹಿಂದೂ ಪರಿಷತ್,ಭಜರಂಗದಳ ಬಂಟ್ವಾಳ ಪ್ರಖಂಡ ವತಿಯಿಂದ ಲೋಕಕಲ್ಯಾಣಾರ್ಥವಾಗಿ "ನಮ್ಮನಡೆ ಪೊಳಲಿ ದೇವಸ್ಥಾನದ ಕಡೆ" ಬೃಹತ್ ಪಾದಯಾತ್ರೆಯು ಭಾನುವಾರ ಮುಂಜಾನೆ ನಡೆಯಿತು. ಬೆಳಗ್ಗಿನ ಜಾವ‌ 5.30 ರ ವೇಳೆಗೆ ಕಡೆಗೋಳಿ ಪೊಳಲಿ ದ್ವಾರ,...