Sunday, October 22, 2023

ಕೋವಿಡ್-19 ಆರೋಗ್ಯ ತಪಾಸಣೆ ಮೊಬೈಲ್ ಫಿವರ್ ಕ್ಲಿನಿಕ್ ಗೆ ಚಾಲನೆ

Must read

ಬಂಟ್ವಾಳ: ಬಂಟ್ವಾಳ ತಾಲೂಕು ಸಿದ್ದಕಟ್ಟೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಸಹಯೋಗದೊಂದಿಗೆ ಕೋವಿಡ್-19 ಆರೋಗ್ಯ ತಪಾಸಣೆಗಾಗಿ ಮೊಬೈಲ್ ಫಿವರ್ ಕ್ಲಿನಿಕ್ ಗೆ  ಮಂಗಳವಾರ ಚಾಲನೆ ನೀಡಲಾಯಿತು.

ಬಂಟ್ವಾಳ ತಾಲೂಕಿನ ಹೆಚ್ಚು ಜನಸಂದಣಿ ಇರುವ ಪ್ರದೇಶದಲ್ಲಿ ಸರ್ಕಾರಿ ವೈದ್ಯರು ಲಭ್ಯವಿಲ್ಲದೇ ಇರುವ ಪ್ರಾ.ಆ.ಕೇಂದ್ರದ ವ್ಯಾಪ್ತಿಯಲ್ಲಿ ಸಂಚಾರಿಸಿ ಆರೋಗ್ಯ ಸೇವೆ ನೀಡಲಿದೆ.

ಈ ಸಂದರ್ಭದಲ್ಲಿ ಡಾ. ಹೇಮಪ್ರಭಾ, ಡಾ. ಇರ್ಫಾನ, ಕಿರಿಯ ಮಹಿಳಾ ಆರೋಗ್ಯ ಸಹಾಯಕಿ, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದು, 20 ಜನರಿಗೆ ಸೇವೆ ನೀಡಿದರು.
ಈ ನಿಟ್ಟಿನಲ್ಲಿ ಪ್ರತಿ ಮಂಗಳವಾರ ಪೂರ್ವಾಹ್ನ 10-12 ಗಂಟೆ ಸಿದ್ದಕಟ್ಟೆ ಬಸ್ ಸ್ಟಾಂಡ್ ಮುಂಭಾಗದಲ್ಲಿ ಹಾಗೂ ಅಪರಾಹ್ನ 02-04 ಗಂಟೆ ಉಳಿ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಮೊಬೈಲ್ ಫಿವರ್ ಕ್ಲಿನಿಕ್ ಕಾರ್ಯ ನಿರ್ವಹಿಸಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಇದರ ಸದುಪಯೋಗ ಪಡೆಯಬೇಕೆಂದು ಬಂಟ್ವಾಳ ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಾ ಪ್ರಭು ತಿಳಿಸಿದ್ದಾರೆ.

More articles

Latest article