


ಬಂಟ್ವಾಳ: ರಾಜ್ಯದಲ್ಲಿ ಇಂದು 388 ಹೊಸ ಕೊರೋನಾ ಸೋಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 3796 ಕ್ಕೆ ಏರಿಕೆಯಾಗಿದೆ.
ಉಡುಪಿ 150, ಕಲಬುರಗಿ 100, ಬೆಳಗಾವಿ 51, ರಾಯಚೂರು 16, ಬೆಂಗಳೂರು ನಗರ 12, ಬೀದರ್ 10, ಹಾಸನ 9, ಬಾಗಲಕೋಟೆ 9, ದಾವಣಗೆರೆ 7, ಯಾದಗಿರಿ 5, ಮಂಡ್ಯ, ವಿಜಯಪುರ ತಲಾ 4, ಬೆಂಗಳೂರು ಗ್ರಾಮಾಂತರ 3, ಚಿಕ್ಕಬಳ್ಳಾಪುರ, ಧಾರವಾಡ, ತುಮಕೂರು ತಲಾ 2, ಕೋಲಾರ 1 ಕೇಸ್ ಪತ್ತೆಯಾಗಿರುವ ಬಗ್ಗೆ ಇಂದಿನ ಹೆಲ್ತ್ ಬುಲೆಟಿನ್ ನಲ್ಲಿ ಪತ್ತೆಯಾಗಿದೆ.
ಇಂದು ರಾಜ್ಯದಲ್ಲಿ 75 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ರಾಜ್ಯದಲ್ಲಿ ಒಟ್ಟು 1403 ಮಂದಿ ಬಿಡುಗಡೆಯಾಗಿದ್ದಾರೆ ಎಂದು ವರದಿ ತಿಳಿಸಿದೆ.


