Sunday, April 14, 2024

ಜಿಲ್ಲೆಯ ಇತಿಹಾಸ ಪ್ರಸಿದ್ಧ ಎರಡು ದೇವಾಲಗಳಲ್ಲಿ ಆಟಿ ಅಮವಾಸ್ಯೆ ತೀರ್ಥಸ್ನಾನಕ್ಕೆ ಕೋವಿಡ್ ಕುತ್ತು: ಭಕ್ತರಿಲ್ಲದೆ ದೇವರಿಗೆ ವಿಶೇಷ ಪೂಜೆ

ಬಂಟ್ವಾಳ: ಇತಿಹಾಸ ಪ್ರಸಿದ್ಧ ಕಾರಿಂಜೇಶ್ವರ ಮತ್ತು ಪಾಣೆಮಂಗಳೂರು ನರಹರಿ ದೇವಾಲಯದಲ್ಲಿ ಈ ಬಾರಿ ಆಟಿ ಅಮವಾಸ್ಯೆ ತೀರ್ಥಸ್ನಾನಕ್ಕೆ ಕೋವಿಡ್ -19 ಮಹಾಮಾರಿ ತಡೆ ನೀಡಿದೆ.
ಸಾವಿರಾರು ಭಕ್ತರು ಇಂದು ಆಟಿ ಅಮವಾಸ್ಯೆಗೆ ಬೆಳಿಗ್ಗೆಯಿಂದಲೇ ಸಾಲು ಸಾಲು ಸಾಲಾಗಿ ಬಂದು ತೀರ್ಥಸ್ನಾನ ಮಾಡಿ ದೇವರ ದರ್ಶನ ಪಡೆದು ಪುನೀತರಾಗುತ್ತಿರುವ ಬಗ್ಗೆ ಈ ಬಾರಿ ಕೇವಲ ನೆನಪು ಮಾತ್ರ. ಕೋವಿಡ್ ಹರಡುವುದನ್ನು ತಪ್ಪಿಸಲು ಆಡಳಿತ ಮಂಡಳಿ ಈ ಬಾರಿ ಆಟಿ ಅಮವಾಸ್ಯೆ ತೀರ್ಥಸ್ನಾನಕ್ಕೆ ಅವಕಾಶ ನೀಡಿಲ್ಲ.


ಎರಡು ಕ್ಷೇತ್ರದಲ್ಲೂ ಪೋಲೀಸ್ ಸರ್ಪ ಗಾವಲು
ದೇವಸ್ಥಾನದ ಆಡಳಿತ ಮಂಡಳಿಗಳು ತೀರ್ಥಸ್ನಾನಕ್ಕೆ ಮತ್ತು ದೇವರ ದರ್ಶನಕ್ಕೆ ಅವಕಾಶವಿಲ್ಲ ಎಂದು ಪ್ರಕಟನೆ ನೀಡಿದ್ದಾರೆ.
ಆದರೆ ಇದನ್ನು ಗಮನಿಸದೆ ದೇವಾಲಯಕ್ಕೆ ಯಾರಾದರೂ ಭಕ್ತರು ಬರುವ ನಿರೀಕ್ಷೆ ಇದ್ದು, ಅವರಿಗೆ ತಡೆ ನೀಡುವ ಸಲುವಾಗಿ ರಸ್ತೆಯಲ್ಲಿ ಬಂಟ್ವಾಳ ಗ್ರಾಮಾಂತರ, ಟ್ರಾಫಿಕ್ ಹಾಗೂ ಪುಂಜಾಲಕಟ್ಟೆ ಪೋಲೀಸರು ಬ್ಯಾರಿಕೇಡ್ ಗಳನ್ನು ರಸ್ತೆಗೆ ಅಡ್ಡಲಾಗಿ ಇಟ್ಟಿದ್ದು, ಅದರ ಜೊತೆಗೆ ಬ್ಯಾನರ್ ಕೂಡ ಅಳವಡಿಸಿದ್ದಾರೆ. ದೇವರಿಗೆ ಪ್ರತಿ ವರ್ಷದಂತೆ ಆಟಿ ಅಮವಾಸ್ಯೆಯ ವಿಶೇಷ ಪೂಜೆ ಭಕ್ತರಿಲ್ಲದೆ ನೆರವೇರಿತು.

More from the blog

ಮತದಾರರ ಜಾಗೃತಿ ಕಾರ್ಯಕ್ರಮ, ಕಾಲ್ನಡಿಗೆ ಜಾಥಾ ಹಾಗೂ ಬೀದಿನಾಟಕ

ತಾಲೂಕು ಪಂಚಾಯತ್‌ ಬಂಟ್ವಾಳ, ತಾಲೂಕು ಸ್ವೀಪ್‌ ಸಮಿತಿ, ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ, ಬಂಟ್ವಾಳ ಪುರಸಭೆ, ರಾಷ್ಟ್ರೀಯ ಸೇವಾ ಯೋಜನೆ, ಮತದಾರರ ಸಾಕ್ಷರತಾ...

ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಖಂಡನೀಯ-ಜಗದೀಶ್ ಕೊಯಿಲ

ಬಂಟ್ವಾಳ: ಕಾಸರಗೋಡು ಜಿಲ್ಲೆಯಲ್ಲಿ ರಾಜಕೀಯ ಲಾಭಕ್ಕಾಗಿ ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೋಟೋ ಬಳಕೆ ಮಾಡಿದ್ದು ಖಂಡನೀಯ ಎಂದು ಜಗದೀಶ್ ಕೊಯಿಲ ತಿಳಿಸಿದ್ದಾರೆ. ಅವರು ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ರಾಷ್ಟ್ರೀಯ...

ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬೈಕ್ : ಮೂವರಿಗೆ ಗಾಯ

ಬಂಟ್ವಾಳ: ಕೆ.ಎಸ್.ಆರ್.ಟಿ.ಸಿ.ಬಸ್ ಗೆ ಹಿಂಬದಿಯಿಂದ ಬೈಕ್ ಡಿಕ್ಕಿಯಾಗಿ ಬೈಕಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ನಡೆದಿದೆ. ಮಂಗಳೂರಿನಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ‌.ಸಿ.ಬಸ್ ಗೆ ಹೆಲ್ಮೆಟ್ ಧರಿಸಿದೆ...

ಮನೆ ಮನೆಗೆ ತೆರಳಿ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಪರ ಮತಯಾಚನೆ

ನಮ್ಮ ಬೂತ್ ನಮ್ಮ ಹೊಣೆ ಘೋಷನೇಯಂತೆ ಬೂತ್ ಸಂಖ್ಯೆ 126 ವಾರ್ಡ್ 12 ರ ಅಜ್ಜೀಬೆಟ್ಟು ನಲ್ಲಿ ಮನೆ ಮನೆಗೆ ತೆರಲಿ ಲೋಕ ಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿಯವರ ಪರವಾಗಿ ಮತ ಯಾಚನೆ...