


ಬಂಟ್ವಾಳ : ಕರ್ತವ್ಯ ನಿರತ ಆಶಾ ಕಾರ್ಯಕರ್ತೆ ಯೋರ್ವರಿಗೆ ವ್ಯಕ್ತಿಯೋರ್ವ ದೊಣ್ಣೆಯಿಂದ ಹಲ್ಲೆ ನಡೆಸಿದ ಘಟನೆ ಬಂಟ್ವಾಳ ತಾಲೂಕಿನ ಚೆನ್ನೈ ತ್ತೋಡಿ ಗ್ರಾ.ಪಂ.ವ್ಯಾಪ್ತಿಯ ಕುಡಂಬೆಟ್ಟು ಗ್ರಾಮದ ಹಲೆಪ್ಪಾಡಿ ಮುಂಡೊಟ್ಟುವಿನಲ್ಲಿ ಗುರುವಾರ ಸಂಭವಿಸಿದೆ.
ವಾಮದಪದವು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಮತಾ ಗಟ್ಟಿ (ಸಂದೇಶ್ ಗಟ್ಟಿ ಅವರ ಪತ್ನಿ)ಅವರಿಗೆ ಇಲ್ಲಿಯ ಮಜಲು ನಿವಾಸಿ ಕಾಂತಪ್ಪ ಪೂಜಾರಿ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಬೆಳಗ್ಗೆ ಸುಮಾರು 10 ಗಂಟೆಗೆ ಕ್ಕೆ ಮಮತಾ ಅವರು ಕರ್ತವ್ಯದಲ್ಲಿರುವಾಗ ದೊಣ್ಣೆಯಿಂದ ಏಕಾ ಏಕಿ ಹಲ್ಲೆ ನಡೆಸಿದ್ದು, ತಲೆಗೆ, ಕೈಗೆ ಏಟಾಗಿದೆ. ತತ್ ಕ್ಷಣ ಅವರನ್ನು ವಾಮದಪದವು ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ವಾಮದಪದವು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಉಮೇಶ್ ಅಡ್ಯಂತಾಯ ಅವರು ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


