Friday, April 5, 2024

ಅಕ್ರಮ ಮರ ಸಾಗಾಟ: ಆರೋಪಿಗಳ ಬಂಧನ, ಲಕ್ಷಾಂತರ ರೂ. ಮೌಲ್ಯದ ಸೊತ್ತಗಳು ವಶ

ಬಂಟ್ವಾಳ: ತಾಲೂಕಿನ ಬಾಳ್ತಿಲ ಗ್ರಾಮದ ಕಲ್ಲಡ್ಕ ಎಂಬಲ್ಲಿ ಸರಕಾರಿ ಜಾಗದ ಅಕೇಶಿಯಾ ಮರಗಳನ್ನು ಅಕ್ರಮವಾಗಿ ಕಡಿದು ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಸೊತ್ತುಗಳ ಸಹಿತ ಬಂಟ್ವಾಳ ವಲಯ ಅರಣ್ಯಾಧಿಕಾರಿ ನೇತೃತ್ವದ ತಂಡ ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿರುತ್ತಾರೆ.

ಘಟನೆಯಲ್ಲಿ ಆರೋಪಿಗಳಾದ ಶೇಖರ ಸಪಲ್ಯ, ಗಣೇಶ್ ಪೂಜಾರಿ, ಮೋನಪ್ಪ ಹಾಗೂ ಐವನ್ ಅವರನ್ನು ಬಂಧಿಸಲಾಗಿದೆ. ಬಳಿಕ ಅವರಿಂದ ಮುಚ್ಚಳಿಕೆ ಬರೆಸಿ ಬಿಡುಗಡೆಗೊಳಿಸಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಮೌಲ್ಯ 3 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ್, ಉಪವಲಯ ಅರಣ್ಯಾಧಿಕಾರಿ ಪ್ರೀತಮ್, ಯಶೋಧರ, ಅರಣ್ಯ ರಕ್ಷಕರಾದ ಜಿತೇಶ್ ಪಿ., ರೇಖಾ, ದಯಾನಂದ, ವೀಕ್ಷಕ ಪ್ರವೀಣ್ ಹಾಗೂ ವಾಹನ ಚಾಲಕ ಜಯರಾಮ ಪಾಲ್ಗೊಂಡಿದ್ದರು. ಈ ಪ್ರಕರಣ ತನಿಖೆಯನ್ನು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ರಹ್ಮಣ್ಯ ರಾವ್ ನಡೆಸಲಿದ್ದಾರೆ.

More from the blog

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...