Saturday, April 6, 2024

ಚರ್ಚ್ ಧರ್ಮಗುರುಗಳ ವರ್ಗಾವಣೆ

ಬಂಟ್ವಾಳ: ಲೋರೆಟ್ಟೋ ಮಾತಾ ಚರ್ಚಿನ ಧರ್ಮಗುರುಗಳಾದ ವಂದನಿಯ ಎಲಿಯಾಸ್ ಡಿಸೋಜ ಅವರು ಜು.29 ರಂದು ಪಾಲಡ್ಕ  ಸಂತ ಇಗ್ನೇಷಿಯಸ್ ಲೋಯೆಲ್ಲಾ  ಚರ್ಚ್ ಧರ್ಮಗುರುಗಳಾಗಿ ವರ್ಗಾವಣೆಗೊಳ್ಳುತ್ತಿರುವ ಸಂದರ್ಭದಲ್ಲಿ ಅವರನ್ನು ಚರ್ಚ್ ಪಾಲನಾ ಮಂಡಳಿ ಹಾಗೂ ಎಲ್ಲಾ ಭಕ್ತಾದಿಗಳ ಪರವಾಗಿ ಬೀಳ್ಕೊಡುಗೆ ಸಮಾರಂಭ ಪವಿತ್ರ ಬಲಿಪೂಜೆಯ ನಂತರ ಚರ್ಚನಲ್ಲಿ ನಡೆಯಿತು. ಬಾಂಬಿಲ್ ಚರ್ಚ್ ಧರ್ಮಗುರು ಹಾಗೂ ಲೋರೆಟ್ಟೋ ಆಂಗ್ಲ ಮಾಧ್ಯಮ ಶಾಲಾ ಪ್ರಾಂಶುಪಾಲ ವಂ. ಪೀಟರ್ ಗೊನ್ಸಲ್ವಿಸ್  ಬಲಿಪೂಜೆಯಲ್ಲಿ ಪಾಲ್ಗೊಂಡರು. ಪಾಲನ ಮಂಡಳಿಯ ಕಾರ್ಯದರ್ಶಿ ಆಲ್ವಿನ್ ಪಿಂಟೊ ಸನ್ಮಾನ ಪತ್ರ ವಾಚಿಸದರು. ಪಾಲನಾ ಮಂಡಳಿ ಉಪಾಧ್ಯಕ್ಷ ಐಸಾಕ್ ವಾಸ್ ರವರು ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿದರು. ನಿರ್ಮಲ ಕಾನ್ವೆಂಟ್ ಸುಪೀರಿಯರ್ ಸಿಸ್ಟರ್ ಆಗ್ನೆಸ್ ಅಂದ್ರಾದೆ ರವರು ಹೂಗುಚ್ಛ ನೀಡಿ ಅಭಿನಂದಿಸಿದರು. ಚರ್ಚಿನಲ್ಲಿ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಎಲ್ಲಾ ವಾಳೆಗಳ  ಗುರ್ಕರ್ ರವರು  ಅಭಿನಂದಿಸಿದರು. ಸನ್ಮಾನ ಸ್ವೀಕರಿಸಿ ಮಾತನಾಡಿದ ಧರ್ಮಗುರುಗಳು ತಮ್ಮ ಆರು ವರ್ಷದ ಸೇವಾವಧಿಯಲ್ಲಿ ಸಹಕರಿಸಿದ ಎಲ್ಲಾರನ್ನೂ ಕೃತಜ್ಞತೆಯಿಂದ ಸ್ಮರಿಸಿದರು.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...