Tuesday, April 16, 2024

ಬೆಳ್ತಂಗಡಿ: ವೃದ್ದೆ ತಾಯಿಗೆ ಹಲ್ಲೆ ಮಾಡಿದ ಪುತ್ರ, ಮೊಮ್ಮಗ ಅರೆಸ್ಟ್‌

ಬೆಳ್ತಂಗಡಿ: ಅಮಾನುಷವಾಗಿ ವಯೋವೃದ್ದೆ ತಾಯಿಗೆ ಪುತ್ರ, ಮೊಮ್ಮಗ ಇಬ್ಬರು ಸೇರಿ ಹಲ್ಲೆ ನಡೆಸಿದ ಘಟನೆ ಸವಣಾಲು ಗ್ರಾಮದ ಹಲಸಿನಕಟ್ಟೆಯಲ್ಲಿ ನಡೆದಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಪುತ್ರ, ಮೊಮ್ಮಗ ಹಾಗೂ ಇನ್ನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ವಯೋವೃದ್ಧೆ ಅಪ್ಪಿ ಶೆಡ್ತಿಯವರ ಮೇಲೆ ಅವರ ಮೊಮ್ಮಗ ಪ್ರದೀಪ ಶೆಟ್ಟಿ ಹಾಗೂ ಮಗ ಶ್ರೀನಿವಾಸ ಶೆಟ್ಟಿ ಕಂಠಪೂರ್ತಿ ಕುಡಿದು ಅಮಾನುಷವಾಗಿ ವೃದ್ಧೆಯನ್ನು ಎತ್ತಿ ನೆಲಕ್ಕೆ ಹಾಕಿ, ಮುಖಕ್ಕೆ ಹೊಡೆದಿದ್ದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದಂತೆ ಜನರಿಂದ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಉಪನಿರೀಕ್ಷಕ ನಂದಕುಮಾರ್‌ ಅವರು, ಈ ಘಟನೆ ಪೊಲೀಸರ ಗಮನಕ್ಕೆ ಬಂದಿದ್ದು, ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದರು.

ಇದೀಗ ಆರೋಪಿ ಮೊಮ್ಮಗ ಪ್ರದೀಪ ಶೆಟ್ಟಿ, ಪುತ್ರ ಶ್ರೀನಿವಾಸ ಶೆಟ್ಟಿ ಹಾಗೂ ಇನ್ನೋರ್ವನನ್ನು ಪೊಲೀಸರು ಬಂಧಿಸಿದ್ದು ಆರೋಪಿಗಳ ವಿರುದ್ಧ ಹಿರಿಯ ನಾಗರಿಕರ ಮೇಲಿನ ದೌರ್ಜನ್ಯ‌ ಹಾಗೂ ಹಲ್ಲೆ ಪ್ರಕರಣ ದಾಖಲು ಮಾಡಿದ್ದಾರೆ.

ವೃದ್ಧೆಯನ್ನು ಆರೈಕೆಗಾಗಿ ಹಿರಿಯ ನಾಗರಿಕ ಪಾಲನಾ ಕೇಂದ್ರಕ್ಕೆ ರವಾನಿಸಲಾಗಿದ್ದು ಈ ಪ್ರಕರಣಕ್ಕೆ ಸಂಬಂಧಿಸಿ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

More from the blog

ಏ.19 -28: ಇತಿಹಾಸ ಪ್ರಸಿದ್ಧ ಕಟ್ಟತ್ತಿಲ ಉರೂಸ್

ವಿಟ್ಲ: ಸಾಲೆತ್ತೂರು ಗ್ರಾಮದ ಕಟ್ಟತ್ತಿಲದಲ್ಲಿ ಅಂತ್ಯ ವಿಶ್ರಾಂತಿ ಹೊಂದುತ್ತಿರುವ ಇತಿಹಾಸ ಪ್ರಸಿದ್ಧ ಅಸ್ಸಯ್ಯಿದ್ ವಲಿಯುಲ್ಲಾಹಿ (ಖ.ಸಿ) ಅವರ ಹೆಸರಿನಲ್ಲಿ 2 ವರ್ಷಕ್ಕೊಮ್ಮೆ ನಡೆಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮ ಮತ್ತು ವಿವಿಧ ಆಧ್ಯಾತ್ಮಿಕ ಕಾರ್ಯಕ್ರಮ...

ಲೋಕಸಭಾ ಚುನಾವಣೆ : ದಕ್ಷಿಣ ಕನ್ನಡ ಕ್ಷೇತ್ರದ ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ನೇಮಕ

ಲೋಕಸಭಾ ಚುನಾವಣೆಯ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಲು ಸಂಯೋಜಕರನ್ನಾಗಿ ಅಬ್ದುಲ್ ರೆಹಮಾನ್ ಪಡ್ಪು ಅವರನ್ನು ನೇಮಕ ಮಾಡಲಾಗಿದೆ.    

ವಿಟ್ಲ ಪೇಟೆಯಲ್ಲಿ ಕಾಂಗ್ರೆಸ್ ರೋಡ್ ಶೋ: ಸುಡುಬಿಸಿಲಿಗೂ ಜಗ್ಗದ ಉತ್ಸಾಹ

ವಿಟ್ಲ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಮಂಗಳವಾರ ವಿಟ್ಲ ಪೇಟೆಯಲ್ಲಿ ರೋಡ್ ಶೋ ನಡೆಸಿ, ಪ್ರಚಾರ ಕಾರ್ಯ ನಡೆಸಿದರು. ಧಾರ್ಮಿಕ ಕೇಂದ್ರಗಳಲ್ಲಿ ವಿಶೇಷ ಪ್ರಾರ್ಥನೆ ನಡೆಸಿ, ಬಳಿಕ...

ದ.ಕ ಜಿಲ್ಲೆಯ 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಬಿಜೆಪಿ ಜತೆ ಮೈತ್ರಿ ಮಾಡಿಕೊಂಡಿರುವುದನ್ನು ವಿರೋಧಿಸಿ ದ.ಕ ಜಿಲ್ಲೆಯ 42 ಮಂದಿ ಜೆಡಿಎಸ್ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಗೊಂಡರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್...