Friday, April 5, 2024

ಬೆಳ್ತಂಗಡಿ: ಅಕ್ರಮ ದನ ಸಾಗಾಟವನ್ನು ತಡೆದ ಭಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ

ಬೆಳ್ತಂಗಡಿ: ಪಿಕಪ್ ನಲ್ಲಿ ಮೂರು ದನ, ಎರಡು ಕರು ಗಳನ್ನು ಹಿಂಸಾತ್ಮಕವಾಗಿ ಸಾಗಿಸುತ್ತಿದ್ದಾಗ ಭಜರಂಗದಳ ಕಾರ್ಯಕರ್ತರು ಹಿಡಿದು ಬೆಳ್ತಂಗಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ಇಂದು ಮುಂಜಾನೆ 3 ಗಂಟೆಗೆ ನಡೆದಿದೆ.

ಈ ದನಗಳನ್ನು ಬೆಳ್ತಂಗಡಿಯ ಸುರ್ಯ ಪಡ್ಪು ವಿನ ಮನೆಯೊಂದರಿಂದ ಸಾಗಿಸಲಾಗುತ್ತಿದ್ದು ಎಂದು ತಿಳಿದು ಬಂದಿದೆ. ಪ್ರಕರಣದ ಆರೋಪಿಗಳಾದ ರಾಜೇಶ್ ಮತ್ತು ಆತನ ಸಹಚರರು ಪಿಕಪ್ ವಾಹನದೊಂದಿಗೆ ಬರುತ್ತಿದ್ದ ಬೆಂಗಾವಲು ವಾಹನದಲ್ಲಿ ಪರಾರಿಯಾಗಿದ್ದಾರೆ ಎಂಬ ಮಾಹಿತಿ ಇದೆ. ಇದೇ ವೇಳೆ ಅಕ್ರಮವಾಗಿ ದನ ಸಾಗಿಸುತ್ತಿದ್ದ ಇವರದ್ದೇ ಮತ್ತೊಂದು ತಂಡ, ಬೆಂಗಾವಲು ಕಾರಿನ ಸಮೇತ ದನವನ್ನು ಕಸಾಯಿಖಾನೆಗೆ  ಸಾಗಿಸುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿದ್ದು, ಅವರನ್ನು ಹಿಡಿಯಲು ಗುರುವಾಯನಕೆರೆ ಬಳಿ ಹೋದಾಗ ಇಬ್ಬರು ಭಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.

ಹಲ್ಲೆಗೊಳಗಾದ ಭಜರಂಗದಳ ಕಾರ್ಯಕರ್ತರು ಆಸ್ಪತ್ರೆಗೆ ದಾಖಲಾಗಿದ್ದಾರೆ‌. ಪಿಕಪ್‌ ವಾಹನದಲ್ಲಿ ಮಂಗಳೂರಿನ ಕಂಕನಾಡಿಯ ಪಿ.ಕೆ ಚಿಕನ್ ಸೆಂಟರ್ ಹೆಸರಲ್ಲಿ ಪಡೆದ ಕೋವಿಡ್-19 ಪಾಸ್ ಪತ್ತೆಯಾಗಿದೆ ಎಂದು ವರದಿಯಾಗಿದೆ.

 

More from the blog

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...

ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಬಂಟ್ವಾಳ ತಾಲೂಕಿನ ಶಕ್ತಿಕೇಂದ್ರವಾದ ಕಲ್ಲಡ್ಕ ಶ್ರೀರಾಮ ಭಜನಾ ಮಂದಿರಕ್ಕೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಆಗಮಿಸಿ ಪ್ರಾರ್ಥನೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕಲ್ಲಡ್ಕ ಡಾ| ಪ್ರಭಾಕರ್ ಭಟ್ ಬಿಜೆಪಿ...

ಬೆಳ್ತಂಗಡಿ: ಆನ್ ಲೈನ್ ಮೂಲಕ ಸಾಲ ನೀಡುವುದಾಗಿ ನಂಬಿಸಿ ವಂಚನೆ : ದೂರು ದಾಖಲು

ಬೆಳ್ತಂಗಡಿ: ಮಹಿಳೆಯೊಬ್ಬರಿಗೆ ಫೇಸ್‌ಬುಕ್‌ ಆಪ್‌ ಮೂಲಕ ಸಾಲ ನೀಡುವುದಾಗಿ ಅಪರಿಚಿತರರು ನಂಬಿಸಿ ವಂಚನೆ ಮಾಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಂಕಕಾರಂದೂರು ಗ್ರಾಮದಲ್ಲಿ ನಡೆದಿದೆ. ವಂಚನೆಗೊಳಗಾದ ಮಹಿಳೆ ನೆಬಿಸಾ ಅವರು ಈ ಬಗ್ಗೆ ವೇಣೂರು ಪೋಲಿಸ್‌...

ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್ “ಹೋಟೆಲ್ ಅನ್ನಪೂರ್ಣ” ಶುಭಾರಂಭ

ಬಂಟ್ವಾಳ ತಾಲೂಕಿನ ಕುಕ್ಕಾಜೆ ಜಂಕ್ಷನ್ ನ ಬ್ಲೀಸ್ ಫುಲ್ ಆರ್ಕೆಡ್ ನಲ್ಲಿ ಅರುಣ್ ಕುಮಾರ್, ಮಹೇಶ್ ಕುಮಾರ್, ಜನಾರ್ಧನ್ ಪೊಸೊಳಿಗೆ ಮಾಲಕತ್ವದ ನೂತನ ಶುದ್ಧ ಸಸ್ಯಹಾರಿ ಫ್ಯಾಮಿಲಿ ರೆಸ್ಟೋರೆಂಟ್. "ಹೋಟೆಲ್ ಅನ್ನಪೂರ್ಣ" ಶುಭಾರಂಭಗೊಂಡಿತು. ಶ್ರೀ...