Saturday, April 13, 2024

ಚಾರ್ಮಾಡಿ ಘಾಟಿಯಲ್ಲಿ ರಾತ್ರಿ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

ಚಿಕ್ಕಮಗಳೂರು: ಕಳೆದ ವರ್ಷದ ಭಾರೀ ಮಳೆಗೆ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಪದೇ ಪದೆ ಭೂ ಕುಸಿತ ಉಂಟಾಗಿ ಸಂಚಾರಕ್ಕೆ ತೊಂದರೆ ಉಂಟಾಗಿತ್ತು. ರಸ್ತೆಗಳಿಗೆ ತಾತ್ಕಾಲಿಕ ತಡೆಗೋಡೆ ನಿರ್ಮಿಸಲಾಗಿದ್ದರೂ ಈ ವರ್ಷವೂ ಧರೆ ಕುಸಿತದ ಭೀತಿ ಇರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಡಾ.ಗೌತಮ್ ಬಗಾದಿ ಈ ರಸ್ತೆಯಲ್ಲಿ ವಾಹನಗಳ ರಾತ್ರಿ ಸಂಚಾರ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.

ಒಂದೆಡೆ ಹವಾಮಾನ ಇಲಾಖೆ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಉತ್ತರ ಕನ್ನಡ, ಚಿಕ್ಕಮಗಳೂರು ಶಿವಮೊಗ್ಗ ಹಾಗೂ ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಜು.9 ಮತ್ತು 10ರಂದು ಅರೆಂಜ್ ಅಲರ್ಟ್ ಘೋಷಿಸಿದೆ. ಇನ್ನೊಂದೆಡೆ ಚಾರ್ಮಾಡಿ ರಸ್ತೆಯಲ್ಲಿ ಬೃಹತ್ ಗಾತ್ರದ ಮರಗಳು ಉರುಳಿ ಬೀಳುವ ಹಾಗೂ ಭೂ ಕುಸಿತವಾಗುವ ಸಂಭವನೆಗಳು ಇದೆ ಎಂದು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಜಿಲ್ಲಾಧಿಕಾರಿಗೆ ವರದಿ ನೀಡಿದ್ದಾರೆ.

ಈ ಹಿನ್ನಲೆಯಲ್ಲಿ ಮುಂದಿನ ಆದೇಶ ಬರುವವರೆಗೂ ರಾಷ್ಟ್ರೀಯ ಹೆದ್ದಾರಿ 73ರ ಮಂಗಳೂರು- ತುಮಕೂರು ರಸ್ತೆಯ ಚಾರ್ಮಾಡಿ ಘಾಟಿ ಚಿಕ್ಕಮಗಳೂರು ಜಿಲ್ಲಾ ಗಡಿಯಿಂದ ಕೊಟ್ಟಿಗೆಹಾರವರೆಗೆ ಪ್ರತಿ ದಿನ ಸಂಜೆ 7ರಿಂದ ಬೆಳಿಗ್ಗೆ 7ರ ವರೆಗೆ ಯಾವುದೇ ವಾಹನ ಸಂಚಾರ ನಿರ್ಬಂಧಿಸಿ ಜಿಲ್ಲಾಧಿಕಾರಿ ಡಾ.ಗೌತಮ್ ಆದೇಶ ಹೊರಡಿಸಿದ್ದಾರೆ.

More from the blog

ಪ್ರಧಾನಿ ಮೋದಿ ರೋಡ್ ಶೋ ಸಮಯ ಬದಲಾವಣೆ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ಸಮಯದಲ್ಲಿ ಬದಲಾವಣೆಯಾಗಿದ್ದು, ಏ.14ರಂದು ಸಂಜೆ 7.45ಕ್ಕೆ ರೋಡ್ ಶೋ ಆರಂಭವಾಗಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಚುನಾವಣಾ ಸಂಚಾಲಕ ವಿ. ಸುನಿಲ್ ಕುಮಾರ್...

ಆಟವಾಡುತ್ತಾ ಜಮೀನಿನಲ್ಲಿದ್ದ ಬೋರ್‌ವೆಲ್​ಗೆ ಬಿದ್ದ 6 ವರ್ಷದ ಬಾಲಕ

ಆರು ವರ್ಷದ ಬಾಲಕನೋರ್ವ ತೆರೆದ ಬೋರ್​ವೆಲ್ ಒಳಕ್ಕೆ ಬಿದ್ದ ಘಟನೆ ಮಧ್ಯಪ್ರದೇಶದ ರೇವಾದಲ್ಲಿ ಬೆಳಕಿಗೆ ಬಂದಿದೆ. ಬೋರ್​ವೆಲ್​ಗೆ ಬಿದ್ದ ಬಾಲಕನನ್ನು ರೇವಾ ಜಿಲ್ಲೆಯ ಜಾನೆ ಪೊಲೀಸ್ ಠಾಣೆ ವ್ಯಾಪ್ತಿಯ ಮಾಣಿಕಾ ಗ್ರಾಮದ ಮಯಾಂಕ್ ಎಂದು...

ಮಯ್ಯರಬೈಲು: ಏ.14 ರಂದು ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಯುಗಾದಿ ಉತ್ಸವ ಕಾರ್ಯಕ್ರಮ

ಮಾತೃಭೂಮಿ ಯುವ ಬಳಗ ಹಾಗೂ ಮಾತೃಭೂಮಿ ಮಹಿಳಾ ಮಂಡಳಿ ಮಯ್ಯರಬೈಲು ಇವರ ಜಂಟಿ ಅಶ್ರಯದಲ್ಲಿ ಚತುರ್ಥ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಯುಗಾದಿ ಉತ್ಸವ ಕಾರ್ಯಕ್ರಮ ಏ.14 ರಂದು ಮಯ್ಯರಬೈಲಿನಲ್ಲಿ...

ಇಂದಿನಿಂದ ಅಂಚೆ ಮತದಾನ ಪ್ರಾರಂಭ

ಇಂದಿನಿಂದ 85 ವರ್ಷ ಮೇಲ್ಪಟ್ಟ ಹಾಗೂ ವಿಶೇಷ ಚೇತನರಿಂದ ಅಂಚೆ ಮತದಾನ ನಡೆಯಲಿದೆ. ಏಪ್ರಿಲ್ 18ರವರೆಗೆ ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶ ಮಾಡಲಾಗಿದೆ. ಇಂದಿನಿಂದ ಏಪ್ರಿಲ್ 18ರವರೆಗೆ ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶವಿದೆ. ಬೆಂಗಳೂರು...